Thursday, January 29

Tag: Actress Ranya Rao

ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನಟಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು. ಮತ್ತೊಂದೆಡೆ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್​​ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್​ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ....