Sunday, June 22

Tag: Advocate Ramesh Babu

ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೆಪಿಸಿಸಿ ನಾಯಕರು

ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೆಪಿಸಿಸಿ ನಾಯಕರು

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ತೀರ್ಮಾನ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಬಿಜೆಪಿ, ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿದ್ದಾರೆ. ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ @BJP4India ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡ...
ಮುಸ್ಲಿಮರ ಬಗ್ಗೆ ‘ಲೆಹರ್ ಸಿಂಗ್’ ಅನುಕಂಪದ ಲಹರಿ? ಕೆಪಿಸಿಸಿ ರಮೇಶ್ ಬಾಬು ವ್ಯಂಗ್ಯ

ಮುಸ್ಲಿಮರ ಬಗ್ಗೆ ‘ಲೆಹರ್ ಸಿಂಗ್’ ಅನುಕಂಪದ ಲಹರಿ? ಕೆಪಿಸಿಸಿ ರಮೇಶ್ ಬಾಬು ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ಸಿಂಗ್ ಅವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಅಚ್ಚರಿಯ ಸಂಗತಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಜಸ್ಟಿಸ್ ಆನಂದ್ ಅವರ ವರದಿಯನ್ನು ಇಟ್ಟುಕೊಂಡು ಲೆಹರ್ ಸಿಂಗ್ ದೊಡ್ಡಮಟ್ಟದ ನಾಟಕ ಆಡಲು ಪ್ರಯತ್ನ ಪಡುತ್ತಿದ್ದಾರೆ ಎಂದೂ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಲೆಹರ್ ಸಿಂಗ್ ಅವರು ರಾಜ್ಯ ಬಜೆಟ್ ಬಗ್ಗೆ ಟೀಕಿರುವ ವೈಖರಿ ಬಗ್ಗೆ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ರಾಜ್ಯಸಭಾ ಸದಸ್ಯರಾದ ರಾಜಸ್ಥಾನಿ ಲೆಹರ್ ಸಿಂಗ್ ರವರು ಕಾಂಗ್ರೆಸ್ ಸರ್ಕಾರದ ಮೇಲೆ ಅನೇಕ ಆರೋಪಗಳನ್ನು ಮಾಡಿರುತ್ತಾರೆ. ತಾವೇ ಸ್ವತಃ ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ರವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಸ್ಟಿಸ್ ಆನಂದ್ ಆಯೋಗದ ವಖ್ಫ್ ಆಸ್ತಿಗೆ ಸಂಬಂಧಪಟ್ಟಂತಹ ವರದಿಯನ್ನು ನಿಷ್ಕ್ರಿಯ ಗೊಳಿಸಿದೆ ಎಂದ...
ರಾಜ್ಯ ಬಿಜೆಪಿಯಲ್ಲಿ ಈಗ ‘ಜಗನ್ನಾಥ ಭವನ Vs ಬಾಲಭವನ’; ಏನಿದು ಕಾಂಗ್ರೆಸ್ ವ್ಯಾಖ್ಯಾನ?

ರಾಜ್ಯ ಬಿಜೆಪಿಯಲ್ಲಿ ಈಗ ‘ಜಗನ್ನಾಥ ಭವನ Vs ಬಾಲಭವನ’; ಏನಿದು ಕಾಂಗ್ರೆಸ್ ವ್ಯಾಖ್ಯಾನ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ 'ಜಗನ್ನಾಥ ಭವನ Vs ಬಾಲಭವನ' ಎಂಬ ಎರಡು ಗುಂಪುಗಳಿವೆ ಎಂದು ಪ್ರದೇಶ ಕಾಂಗ್ರೆಸ್ ವ್ಯಾಖ್ಯಾನಿಸಿದೆ. ಕರ್ನಾಟಕದ ಭಾರತೀಯ ಜನತಾ ಪಕ್ಷ ಗುಂಪುಗಾರಿಕೆಯಿಂದ ಬಸವಳಿದಿದ್ದು, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರವರು ಕರ್ನಾಟಕ ಬಿಜೆಪಿಯನ್ನು ಒಣಗಿದ ಮರಕ್ಕೆ ಹೋಲಿಸಿಕೊಂಡು ಭಿನ್ನಮತೀಯರನ್ನು ಕಾಗೆಗಳಿಗೆ ಹೋಲಿಕೆ ಮಾಡಿ, ಅಪಶಕುನದ ಕಾಗೆಗಳನ್ನು ಗುಂಡಿಟ್ಟು ಓಡಿಸಬೇಕೆಂದು ಪತ್ರಿಕಾ ಸಂದರ್ಶನದಲ್ಲಿ ಹೇಳುವುದರ ಮೂಲಕ ಭೌದ್ದಿಕವಾಗಿ ದಿವಾಳಿಯಾಗಿರುವ, ಗುಂಪುಗಾರಿಕೆಯಿಂದ ತತ್ತರಿಸಿ ಸ್ವಜನ ಪಕ್ಷಪಾತದಿಂದ ತುಳುಕಿರುವ ರಾಜ್ಯ ಬಿಜೆಪಿ ನಾಯಕರ ವ್ಯಕ್ತಿತ್ವವನ್ನು ಅನಾವರಣಗೊಳಿಸಿದ್ದಾರೆ ಎಂದು ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಸದಾನಂದ ಗೌಡರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುಚ ರಮೇಶ್ ಬಾಬು, ಹಿಂದೂ ಸಂಪ್ರದಾಯದಲ್ಲಿ ಕಾಗೆಯನ್ನು ವಿವಿಧ ಆಯಾಮಗಳಲ್ಲಿ ನೋಡಲಾಗುತ್ತದೆ. ಸದಾನಂದ ಗೌಡರು ಕಾಗೆಯನ್ನು ಅಪಶಕುನವೆಂದು ಭಾವಿಸಿ, ರಾಜ್ಯ ಬಿಜೆಪಿಯ ಭಿನ್ನಮತೀಯರನ್ನು ಅಪಶಕುನದ ಕಾಗೆಗಳೆಂದು ಚಿತ್ರಿಸಿರುವುದು ಅವರ ಪಕ್ಷದ ವ್ಯ...
ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು

ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು. ಸಿಆರ್‌ಪಿಸಿ ಕಲಂ 321 ರಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಕೇಸ್ ವಾಪಸ್ ಪಡೆಯಲು ಅವಕಾಶವಿದೆ ಎಂದ ರಮೇಶ್‌ ಬಾಬು, ಕೋಮುದ್ವೇಷ ಹರಡುವಿಕೆ, ದ್...
ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು

ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಿಯೋನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ ಎಂದು ನೆನಪಿಸಿದರು. ಸಿಎಂ ಸಿದ್ದರಾಮಯ್ಯರ ರಾಜಿನಾಮೆ ಕೇಳುವ ಬಿಜೆಪಿಗರೇ ಮೊದಲು ವಿಜಯೇಂದ್ರ ಅವರಿಂದ ರಾಜಿನಾಮೆ ಕೊಡಿಸಿ....
ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ. ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ ನಿರ್...
‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಹುಕೋಟಿ ಕರ್ಮಕಾಂಡ ಕುರಿತಂತೆ SIT ತನಿಖೆಗೆ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ದೂರು ಕುತೂಹಲ ಕೆರಳಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ - ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ ಗುಜರಾತಿನ ಸೂರತ್ ನಿಂದ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನೀಡಿ ಸೀರೆಗಳನ್ನು ಕೊಳ್ಳಲಾಗ...
ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ; ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಆಕ್ಷೇಪ; ಕಾನೂನು ಸಂಘರ್ಷದ ರಣಕಹಳೆ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ; ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಆಕ್ಷೇಪ; ಕಾನೂನು ಸಂಘರ್ಷದ ರಣಕಹಳೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆಂಬ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ರಾಜಕೀಯ ವಿಶ್ಲೇಷಕರೂ, ಕಾನೂನು ತಜ್ಞರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು, ಪ್ರಾಸಿಕ್ಯೂಷನ್ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು 'ಹೈಕೋರ್ಟ್‌ ಹಿಂದೆ ನೀಡಿದ್ದ ಆದೇಶ'ವನ್ನು ಪರಿಗಣಿಸಿಲ್ಲ ಎಂಬ ಬಗ್ಗೆ ಬೊಟ್ಟುಮಾಡಿದ್ದಾರೆ. ಕೆಪಿಸಿಸಿ ಮಾಧ್ಯಮ-ಸಂವಹನ ವಿಭಾಗದ ಅಧ್ಯಕ್ಷರೂ ಆಗಿರುವ ರಮೇಶ್ ಬಾಬು, ರಾಜ್ಯಪಾಲರ ಆತುರದ ನಡೆಯು ರಾಜಕೀಯ ಪ್ರೇರಿತವಾಗಿದ್ದು, ಇದು ಅನಗತ್ಯ ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶ, ಸಲಹೆಗಳನ್ನು ರಾಜ್ಯಪಾಲರು ಗೌರವಿಸಿಲ್ಲ. ಇದು ಪಕ್ಷಪಾತೀಯ ನಡೆಯಾಗಿದ್ದು, ಇದರಿಂದ ಅನಗತ್ಯ ಕಾನೂನು ಸಂಘರ್...
ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು‌ ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಒಬ್ಬರು. ಜನನಾಯಕರು ಸಂದರ್ಭಕ್ಕೆ ಪೂರಕವಾಗಿ ತಮ್ಮ ನಿಲುವು ಮತ್ತು ಹೇಳಿಕೆಗಳನ್ನು ಬದಲಾಯಿಸಿದರೆ ಅವರು ...