ಬೆಂಗಳೂರಲ್ಲಿ ಅಮೆರಿಕ ರಾಯಭಾರ ಕಚೇರಿ; ಲಾಸ್ ಏಂಜಲೀಸ್‌ನಲ್ಲಿ ಭಾರತೀಯ ಧೂತಾವಾಸ ಕಚೇರಿ
ಬೆಂಗಳೂರು: ಲಾಸ್ ಏಂಜಲೀಸ್‌ನಲ್ಲಿ ಶೀಘ್ರದಲ್ಲೇ ಭಾರತೀಯ ರಾಜತಾಂತ್ರಿಕ ಕಚೇರಿ ಆರಂಭವಾಗಲಿದೆ. ದೇಶಾಂಗ ಸಚಿವ ಎಸ್ ಜೈಶಂಕರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಅಮೆರಿಕ ರಾಯಭಾರ ಕಚೇರಿಯನ್ನು ಉದ್ಘಾಟಿಸಿದ ಜೈಶಂಕರ್, ಅಮೆರಿಕದ ಈ ರಾಯಭಾರ ಕಚೇರಿ ಆರಂಭಗೊಂಡಿರುವುದರಿಂದ ಉಭಯ ದೇಶಗಳ ನಡುವಿನ ಸಂಬಂಧ ವೃದ್ಧಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಆರಂಭಿಸುವ ಬೇಡಿಕೆಯನ್ನು ಅವರು ಈಡೇರಿಸಿದ್ದು, ನಾವು ಕೂಡಾ ಶೀಘ್ರದಲ್ಲೇ ಲಾಸ್ ಏಂಜಲೀಸ್‌ನಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಯನ್ನು ಆರಂಭಿಸುತ್ತೇವೆ ಎಂದು ಜೈಶಂಕರ್ ಇದೇ ವೇಳೆ ತಿಳಿಸಿದರು.
ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಅಮೆರಿಕ ಕಾನ್ಸುಲೇಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಸಮಾರಂಭವನ್ನು ಆಯೋಜಿಸಿರುವ @USAmbIndia ಎರಿಕ್ ಗಾರ್ಸೆಟ್ಟಿ ಮತ್ತು ಅವರ ತಂಡಕ್ಕೆ ಅಭಿನಂದನೆಗಳು.
ಭಾರತ-ಅಮೇರಿಕಾ ಸಹಕಾರವು, ಈ ಎರಡು ದೇಶಗಳ ಜನರ ದೃಢವಾದ ಸಂಬಂಧಗಳಿಂದ ಮುನ್ನಡಿಸಲ್ಪಟ್ಟಿದೆ. ಇದು ತಂತ್ರಜ್ಞಾನ,… pic.twitter.com/voz...
