Saturday, December 6

Tag: ASHA workers’ salaries

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗೌರವಧನ, ಪೋರ್ಟಲ್ ಸುಧಾರಣೆ, ಆಶಾ ಕಾರ್ಯವನ್ನು ಅಭಿನಂದಿಸಿದ ಸಿಎಂ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗೌರವಧನ, ಪೋರ್ಟಲ್ ಸುಧಾರಣೆ, ಆಶಾ ಕಾರ್ಯವನ್ನು ಅಭಿನಂದಿಸಿದ ಸಿಎಂ

Others
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ ಎಂದವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಪೋರ್ಟಲ್ ಸುಧಾರಣೆಗೆ ಸೂಚನೆ: ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಗೌರವಧನ ನಿಲ್ಲಿಸದೆ ರಜೆ: ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ...