
AICCಯಲ್ಲಿ ಭಾರೀ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ
ನವದೆಹಲಿ: ಪ್ರದೇಶ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರಾಜ್ಯಗಳಿಗೆ ಹೊಸಬರನ್ನು ಎಐಸಿಸಿ ನೇಮಕ ಮಾಡಿದೆ. ಇದೇ ವೇಳೆ, ಪ್ರದೇಶ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣಕ್ಕೆ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಮತ್ತು ಪುದುಚೇರಿಗೆ ಗಿರಿ ಚೋಡಂಕರ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.
ಶುಕ್ರವಾರ ನಡೆದ ಪ್ರಮುಖ ಪುನರ್ರಚನೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು AICC ನೇಮಿಸಿದೆ. ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರನ್ನು ಪಂಜಾಬ್‌ಗೆ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ. ಮಧ್ಯಪ್ರದೇಶಕ್ಕೆ ವರ್ಗಾವಣೆಗೊಂಡಿರುವ ಹರೀಶ್ ಚೌಧರಿ ಅವರ ಬದಲಿಗೆ ಬಘೇಲ್ ನೇಮಕಗೊಂಡಿದ್ದಾರೆ.
ಕರ್ನಾಟಕದ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗೆ ...