Tuesday, June 24

Tag: B.Y.Vijayendra

ಪೊಲೀಸ್ ಅಧಿಕಾರಿ ಕೈ ಮಾಡಲು ಯತ್ನ? ಸಿಎಂ ಕ್ಷಮಯಾಚನೆಗೆ ವಿಜಯೇಂದ್ರ ಆಗ್ರಹ

ಪೊಲೀಸ್ ಅಧಿಕಾರಿ ಕೈ ಮಾಡಲು ಯತ್ನ? ಸಿಎಂ ಕ್ಷಮಯಾಚನೆಗೆ ವಿಜಯೇಂದ್ರ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪೊಲೀಸ್ ಅಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು… pic.twitter.com/8xiwMbHjqV — Vijayendra Yediyurappa (@BYVijayendra) April 28, 2025 ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತ...
‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ... ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025 ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ' ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ' ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕ...
ಯತ್ನಾಳ್ ಉಚ್ಚಾಟನೆ: ‘ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ’

ಯತ್ನಾಳ್ ಉಚ್ಚಾಟನೆ: ‘ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ’

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವ ಪಕ್ಷದ ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರನ್ನು ಬುಧವಾರ ಬಿಜೆಪಿ ಹೈಕಮಾಂಡ್ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಆ ಸುದ್ದಿ ಹರಡುತ್ತಿದ್ದಂತೆಯೇ ವಿಜಯೇಂದ್ರ ಬೆಂಬಲಿಗರು ಹಲವೆಡೆ ಸಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಈ ಬೆಳವಣಿಗೆ ಬಗ್ಗೆ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, 'ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ, ಅಶಿಸ್ತಿನ ವಿರುದ್ಧ ಇಂದು ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರವನ್ನು ಸಂಭ್ರಮಿಸಬಾರದೆಂದು ವಿನಂತಿಸುತ್ತೇನೆ' ಎಂದಿದ್ದಾರೆ. 'ಸಂಸ್ಕಾರವಂತ ಹಾಗೂ ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ...
ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

Focus, Update, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿರುವ ಪ್ರತಿಕ್ರಿಯೆ ಗಮನಸೆಳೆದಿದೆ. ಪಕ್ಷದ ಕಾರ್ಯಕರ್ತರಿಗೆ ಅವರು ರವಾನಿಸಿರುವ ಸಂದೇಶ ಕೂಡಾ ಕುತೂಹಲದ ಕೇಂದ್ರಬಿಂದುವಾಗಿದೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮವು ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ...
ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿ ನಮ್ಮ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ, ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ… https://t.co/uWGNuoxoTE— Vijayendra Yediyurappa (@BYVijayendra) March 21, 2025 ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತ ಮಾನ್ಯ… ರವರು ಅದನ್ನು ಕಸಿಯುವ ಪಕ್ಷಪಾತಿ ನಿಲುವು ತಳೆದದ್ದು ಕಾಂಗ್ರೆಸ್ನ ತುಘಲಕ್ ಸರ್ಕಾರದ ತಾಳಕ್ಕ...
ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹನಿಟ್ರ್ಯಾಪ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿದರು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟಿಸಲಿದೆ ಎಂದು ತಿಳಿಸಿದರು. ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ… pic.twitter.com/AIeVECRVjV— BJP Karnat...
ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ಅಖಾಡಕ್ಕಿಳಿದ ವಿಜಯೇಂದ್ರ

ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ಅಖಾಡಕ್ಕಿಳಿದ ವಿಜಯೇಂದ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚಿತ್ರದುರ್ಗದಲ್ಲಿ PSI ಮೇಲೆ ಮಧುಗಿರಿ ಬಿಜೆಪಿ ಅಧ್ಯಕ್ಷ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯವನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸ್ ಅಧಿಕಾರಿಯೇ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ… pic.twitter.com/zf5ZN3pk3J — Vijayendra Yediyurappa (@BYVijayendra) March 15, 2025 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣ...
‘ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ’: ವಿಜಯೇಂದ್ರ

‘ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ’: ವಿಜಯೇಂದ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಡವರ ಶೋಷಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ 'ದಲಿತರ ಕಣ್ಣೀರ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿದ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪರಿಶಿಷ್ಟರ ಕರಾಳ ದಿನಕ್ಕೆ ಕಾರಣರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿರುವ ಈ ಸರ್ಕಾರ ಶೋಷಿತರ ಕಣ್ಣಲ್ಲಿ ನೀರು ಹರಿಸಿದರೆ ಆ ಶಾಪ ನಿಮ್ಮ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಬಿಜೆಪಿ ರಾಜ್ಯ ಪ್ರಧಾನ...
ರಾಜ್ಯದಲ್ಲಿ ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ?

ರಾಜ್ಯದಲ್ಲಿ ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ 'ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ' ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇದೀಗ ಖಾಸಗಿ ಬಡಾವಣೆಗಳು ಸರ್ಕಾರದ ಅನುಮತಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ನಿರ್ಧಾರವು ಭ್ರಷ್ಟಾಚಾರವನ್ನು ವಿಧಾನ ಸೌಧದ ವರೆಗೂ ವಿಸ್ತರಿಸಿಕೊಳ್ಳುವ ಹುನ್ನಾರವೇ ಹೊರತು ಇದರ ಹಿಂದೆ ಯಾವ ಸದುದ್ದೇಶವೂ ಅಡಗಿಲ್ಲ ಎನ್ನುವುದು ಬಹಿರಂಗ ಸತ್ಯ ಎಂದಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರಗಳು ಬಹುತೇಕ ನಿಷ್ಕ್ರೀಯಗೊಂಡು ‘ನಿಂತ ನೀರಾಗಿವೆ’ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಬಡಾವಣೆ ನಿರ್ಮಿಸಲು ಸಾಧ್ಯವಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಅಭಿವೃದ್ಧಿ ಪ್ರಾಧಿಕಾರಗಳಿಗೆ ಚುರುಕು ಮುಟ್ಟಿಸುವ ಗೋಜಿಗೇ ಹೋಗಿಲ್ಲ,ಇದರ ಪರಿಣಾಮವೇ ಮೈಸೂರು ಮುಡಾ ಹಗರಣದ ಕುಖ್ಯಾತಿ ಸಾಗರದಾಚೆಗೂ ಸದ್ದುಮಾಡಿದೆ ಎಂದವರು ವಿಶ್ಲೇಷಿಸಿದ್ದಾರೆ. ಸೂರಿಲ್ಲದ ಜನರು ಗೃಹ ನಿರ್ಮಾಣ ಸಹಕಾರ ಸಂಘಗಳ ಮೂಲಕ ಹಾಗೂ ಖಾಸಗಿ ನಿರ್ಮಾಣಕಾರರ ಮೂಲಕ ಹೆಚ್ಚಿನ ಬೆಲೆ ತೆತ್ತಾದರೂ ಪ್ಲಾಟ್ ಅಥವಾ ನಿವೇಶನ ಪಡ...
ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಪಕ್ಷ ಶಾಸಕರಿಗೆ ಬೆದರಿಕೆಗಳು ಎದುರರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಬಿಜೆಪಿ ಶಾಸಕರಿಗೆ ಆತಂಕವಾಗಿ ಕಾಡುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಸಿ.ಟಿ.ರವಿ ಅವರಿಗೆ ರವಾನೆಯಾಗಿರುವ ಬೆದರಿಕೆ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣ 'X;ನಲ್ಲಿ ಟ್ಯಾಗ್ ಮಾಡಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ. ಸಿ.ಟಿ.ರವಿ ಅವರನ್ನು ಗುರ...