Tuesday, June 24

Tag: Basanagouda Patil Yatnal New Party

ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ವಿಜಯಪುರ: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ಸುಳಿವನ್ನು ನೀಡಿದ್ದಾರೆ. ಕುಟುಂಬ ರಾಜಕಾರಣದಿಂದಾಗಿ ಬಿಜೆಪಿ ಸರ್ವನಾಶವಾಗಲಿದೆ ಎಂದಿರುವ ಯತ್ನಾಳ್. ಜನರ ಅಭಿಪ್ರಾಯ ಸಂಗ್ರಹಿಸಿ ಒಂದು ಹಿಂದು ಪಕ್ಷ ಆಸ್ತಿತ್ವಕ್ಕೆ ತರಬೇಕಾಗುತ್ತದೆ ಎಂದು ಹೇಳಿದ್ದಾರೆ. ಯುಗಾದಿ ಸಂದರ್ಭದಲ್ಲಿ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಬಹಳಷ್ಟು ಜನರು ಬಿಜೆಪಿಯಿಂದ ಹಿಂದು ರಕ್ಷಣೆ ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಡಿಯೂರಪ್ಪ ಕುಟುಂಬ ಹೊಂದಾಣಿಕೆ ರಾಜಕೀಯ ಮಾಡಿ ಪಕ್ಷವನ್ನು ದುರ್ಬಲ ಮಾಡಿದೆ. ಹೀಗಾಗಿ ಹಿಂದುಗಳ ರಕ್ಷಣೆ, ದೇಶಕ್ಕಾಗಿ ಹಿಂದು ಪಕ್ಷ ಆಸ್ವಿತ್ವ ತರಬೇಕಾಗಿದೆ ಎಂದು ಪ್ರತಿಪಾದಿಸಿದರು. 'ನಾವು, ಬಿಜೆಪಿ-ಪ್ರಧಾನಿ ನರೇಂದ್ರ ಮೋದಿ ವಿರೋಧಿಗಳಲ್ಲ. ಯಡಿಯೂರಪ್ಪ ಬಿಟ್ಟು ನಮಗೆ ಬೇರೆ ಗತಿಯಿಲ್ಲ ಎಂದು ನೀವು ಹೇಳಿದರೆ ನಮ್ಮ ದಾರಿ ನಾವು ಕಂಡುಕೊಳ್ಳಬೇಕಾಗುತ್ತದೆ ಎಂದಿರುವ ಯತ್ನಾಳ್, ಹಿಂದೂ ಪಕ್ಷ ಕಟ್ಟುವ ಬಗ್ಗೆ ಬೀದರ್‌ನಿಂದ ಹಿಡಿದು ಚಾಮರಾಜನಗರವರೆಗೂ ಒತ್ತಾಯಿಸಿದ್ದಾರೆ. ಹೀಗಾಗಿ ಹೊಸ ಪಕ್ಷದ ಬ...