Tag: basanagowda patil yatnal

  • ‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

    ‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

    ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಿಗೆ ಬರೆದಿರುವ ಪತ್ರ ಗಮನಸೆಳೆದಿದೆ.

    ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

    “ದೇಶದಾದ್ಯಂತ ರೈತರ, ದೇವಸ್ಥಾನಗಳ, ಟ್ರಸ್ಟ್‌ಗಳ ಮತ್ತು ಮಠಗಳ ಜಮೀನುಗಳ ಮೇಲೆ ವಕ್ಫ್ ಮಂಡಳಿಯು ಹಕ್ಕು ಸಾಧಿಸುತ್ತಿರುವುದು ವಿಷಾದದ ಸಂಗತಿ. ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು” –ಯತ್ನಾಳ್ ಆಗ್ರಹ.

      ದೇಶದ ಎಲ್ಲಾ ಪ್ರಜೆಗಳಿಗೂ ಭೂಮಿಯ ಮೇಲೆ ಸಮಾನ ಹಕ್ಕಿದೆ. ಹೀಗಿರುವಾಗ ವಕ್ಫ್‌ ಕೂಡಾ ಜಾತ್ಯತೀತ ರಾಷ್ಟ್ರದಲ್ಲಿ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಕಾರ್ಯನಿರ್ವಹಿಸಬೇಕಿದೆ ಎಂದು ಪ್ರತಿಪಾದಿಸಿರುವ ಯತ್ನಾಳ್, ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

  • ವಿಜಯೇಂದ್ರ ನಾಯಕತ್ವಕ್ಕೆ ಸೆಡ್ಡು ಹೊಡೆಯಲು ಬಿಜೆಪಿ ಅತೃಪ್ತರ ಕಾರ್ಯತಂತ್ರ; ಮೈಸೂರು ಯಾತ್ರೆಗೆ ಪರ್ಯಾಯವಾಗಿ ಬಳ್ಳಾರಿ ಯಾತ್ರೆಗೆ ತಯಾರಿ

    ಬೆಳಗಾವಿ: ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಬೆನ್ನಲ್ಲೇ ಇದೀಗ ಮತ್ತೊಂದು ಹೋರಾಟಕ್ಕೆ ಬಿಜೆಪಿ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವ ಒಪ್ಪದ ನಾಯಕರ ಗುಂಪು ಈ ಹೋರಾಟ ನಡೆಸಲು ಸಿದ್ಧತೆ ನಡೆಸಿರುವ ಬೆಳವಣಿಗೆ ಕಮಲ ಪಾಳಯದಲ್ಲಿ ಕುತೂಹಲ ಕೆರಳಿಸಿದೆ.

    ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ನೇತೃತ್ವದ ಈ ಗುಂಪು ಬಿಜೆಪಿಯ ಅತೃಪ್ತ ನಾಯಕರನ್ನು ಒಗ್ಗೂಡಿಸಿ ಬಳ್ಳಾರಿ ಯಾತ್ರೆಗೆ ಮುಂದಾಗಿದ್ದಾರೆ. ಸೆಪ್ಟೆಂಬರ್ 17ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಬೆಳಗಾವಿಯಲ್ಲಿ ಬಿಜೆಪಿಯ ನಾಯಕರು ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

    ಬೆಳಗಾವಿಯದ ಖಾಸಗಿ ರೆಸಾರ್ಟ್​ನಲ್ಲಿ ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್​ ನೇತೃತ್ವದಲ್ಲಿ ನಡೆದಿರುವ ಈ ಸಭೆಯಲ್ಲಿ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಪ್ರತಾಪ್ ಸಿಂಹ, ಜಿ.ಎಂ.ಸಿದ್ದೇಶ್ವರ್, ಅಣ್ಣಾಸಾಹೇಬ್ ಜೊಲ್ಲೆ, ಬಿ.ಪಿ.ಹರೀಶ್, ಎನ್.ಆರ್.ಸಂತೋಷ್ ಭಾಗಿಯಾಗಿದ್ದರು ಎನ್ನಲಾಗಿದೆ. ಮುಡಾ ವಿಚಾರದಲ್ಲಿ ಮೈಸೂರು ಪಾದಯಾತ್ರೆಗೆ ಪ್ರತಿಯಾಗಿ ಬಳ್ಳಾರಿ ಯಾತ್ರೆ ನಡೆಸಿ ವಿಜಯೇಂದ್ರ ನಾಯಕತ್ವಕ್ಕೆ ಸೆಡ್ಡು ಹೊಡೆಯಲು ಈ ನಾಯಕರು ಮುಂದಾಗಿದ್ದಾರೆ ಎಂಬ ಚರ್ಚೆ ನಡೆದಿದೆ.

  • ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

    ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

    ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಬಳ್ಳಾರಿ ಚಲೋಗೆ ಬಿಜೆಪಿ ತಯಾರಿ ನಡೆಸಿದೆ.

    ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ತಯಾರಿ ನಡೆಸಿದ್ದು
    ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಅಕ್ರಮಗಳನ್ನು ಖಂಡಿಸಿ ಸದ್ಯದಲ್ಲೇ ಬಳ್ಳಾರಿಯಲ್ಲಿ ಈ ಬೃಹತ್ ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ.

    ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರು ಈ ಸಂಬಂಧ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿ ಭಾಗದ ಪ್ರಭಾವಿ ನಾಯಕ ಶ್ರೀರಾಮುಲು ಬೆಂಬಲಿಗರು ಕೂಡಾ ಬಳ್ಳಾರಿ ಚಲೋ ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

    ಇದಕ್ಕೆ ಪೂರಕವೆಂಬಂತೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ತಮ್ಮಪಕ್ಷ ಉತ್ಸುಕವಾಗಿದೆ ಎಂದು ತಿಳಿಸಿದ್ದಾರೆ. ಬೀದರ್‌ನಿಂದ ಬಳ್ಳಾರಿಗೆ ಅಥವಾ ಬಳ್ಳಾರಿಯಿಂದ ಚಿತ್ರದುರ್ಗಕ್ಕೆ ಪಾದಯಾತ್ರೆ ನಡೆಸುವ ಬಗ್ಗೆ ಚರ್ಚೆ ನಡೆದಿದ್ದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೆ ಈ ಬಗ್ಗೆ ನಿರ್ಧರಿಸಲಾಗುವುದು ಎಂದವರು ತಿಳಿಸಿದ್ದಾರೆ.