
ಆರ್ಥಿಕವಾಗಿ ದುರ್ಬಲರಾದವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಿ; ಕಿದ್ವಾಯಿ ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.
ಬಡರೋಗಿಗಳ ಆರ್ಥಿಕ ಹೊರೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, ಅಂತಿಮ ಆರೋಗ್ಯ ತನಿಖಾ ವರದಿಗಳು ನೀಡುವವರೆಗೆ ಅಂತಹ ರೋಗಿಗಳನ್ನು ಆಸ್ಪತ್ರೆಯ ವಾರ್ಡ್ ಗಳಲ್ಲಿ ಒಳರೋಗಿಗಳಾಗಿ ಸೇರಿಸಿಕೊಳ್ಳುವಂತೆ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ (ಕೆಎಂಐಒ) ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೆಎಂಐಒದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ದೇಶನವನ್ನು ಮೊದಲು ನೀಡಲಾಗಿತ್ತಾದರೂ, ಶುಕ್ರವಾರ ಡಾ.ಪಾಟೀಲ್ ಅವರು ಸಂಸ್ಥೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕೃತವಾಗಿ ಆದೇಶ ಹೊರಡಿಸಿ ಜಾರಿಗೆ ತರಲಾಯಿತು.
ಪರಿಶೀಲನೆಯ ಸಮಯದಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾಗಿದ್ದರೂ, ಆಸ್ಪತ್ರೆಯ ಹಾಸಿಗೆಗಳು ಶೇ...