Friday, January 30

Tag: Bengaluru – Shilpa foundation bus stand

ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್

ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ರಾಜಧಾನಿಯ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆಯು ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಸ್ಮಾರ್ಟ್ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದರು. ಈ ಸ್ಮಾರ್ಟ್ ನಿಲ್ದಾಣವು ಹಲವು ವೈಶಿಷ್ಟತೆಗಳಿಂದ ಕೂಡಿದ್ದು ಇದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಇದರಲ್ಲಿರುವ ಸೌಲಭ್ಯಗಳನ್ನು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಬಳಕೆ ಮಾಡಿದಲ್ಲಿ ಯೋಜನೆಯು ಯಶಸ್ವಿಯಾಗಲಿದೆ. ಸ್ಮಾರ್ಟ್ ನಿಲ್ದಾಣವು ಇತರ ಬಸ್ ನಿಲ್ದಾಣಗಳಿಗಿಂತ ವಿಭಿನ್ನವಾಗಿದ್ದು ಸಾರ್ವಜನಿಕರ ಪ್ರತ್ಯೇಕವಾಗಿ ಮಹಿಳೆಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಿದೆ. ಇಲ್ಲಿರುವ ಪ್ಯಾನಿಕ್ ಬಟನ್ ಹಾಗೂ ಸಿಸಿ ಕ್ಯಾಮರಾಗಳು ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಇಂತಹ ಯೋಜನೆಗಳು ಇನ್ನೂ ವಿಸ್ತರಣೆಯಾಗಲಿ ಎಂದು ಸಚಿವ ರಾಮಲಿಂಗ ರೆಡ್ಡಿ ಅಭಿಪ್ರಾಯಪಟ್ಟರು. ಶಿಲ್ಪಾ ಫೌಂಡೇಶನ್ ಸ...