Tag: BJP leader Sriramulu

  • ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

    ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

    ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಬಳ್ಳಾರಿ ಚಲೋಗೆ ಬಿಜೆಪಿ ತಯಾರಿ ನಡೆಸಿದೆ.

    ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ತಯಾರಿ ನಡೆಸಿದ್ದು
    ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಅಕ್ರಮಗಳನ್ನು ಖಂಡಿಸಿ ಸದ್ಯದಲ್ಲೇ ಬಳ್ಳಾರಿಯಲ್ಲಿ ಈ ಬೃಹತ್ ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ.

    ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರು ಈ ಸಂಬಂಧ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿ ಭಾಗದ ಪ್ರಭಾವಿ ನಾಯಕ ಶ್ರೀರಾಮುಲು ಬೆಂಬಲಿಗರು ಕೂಡಾ ಬಳ್ಳಾರಿ ಚಲೋ ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

    ಇದಕ್ಕೆ ಪೂರಕವೆಂಬಂತೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ತಮ್ಮಪಕ್ಷ ಉತ್ಸುಕವಾಗಿದೆ ಎಂದು ತಿಳಿಸಿದ್ದಾರೆ. ಬೀದರ್‌ನಿಂದ ಬಳ್ಳಾರಿಗೆ ಅಥವಾ ಬಳ್ಳಾರಿಯಿಂದ ಚಿತ್ರದುರ್ಗಕ್ಕೆ ಪಾದಯಾತ್ರೆ ನಡೆಸುವ ಬಗ್ಗೆ ಚರ್ಚೆ ನಡೆದಿದ್ದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೆ ಈ ಬಗ್ಗೆ ನಿರ್ಧರಿಸಲಾಗುವುದು ಎಂದವರು ತಿಳಿಸಿದ್ದಾರೆ.