Saturday, December 6

Tag: BJP MLC CT Ravi

ಡಾ.ಅಂಬೇಡ್ಕರ್‌ರ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿಎನ್‌ಎ: ಸಿ.ಟಿ.ರವಿ

ಡಾ.ಅಂಬೇಡ್ಕರ್‌ರ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿಎನ್‌ಎ: ಸಿ.ಟಿ.ರವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ  ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ಸಿನ ಡಿ.ಎನ್.ಎಯು ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ. 370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ. ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನ ಡಿಎನ್‍ಎ ಮುಂದುವರೆದ ಭಾಗವಾಗಿ ಡಿ.ಕೆ.ಶಿವಕುಮಾರರು ಟಿ.ವಿ. ಸಂದರ್ಶನದಲ್ಲಿ ಸಂವಿಧಾನ ಬದಲಿಸುವ ಮಾತನಾಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ಸನ್ನು ಕಿತ್ತೊಗೆದು ನಾವು ಸಂವಿಧಾನ ಉಳಿಸಿಕೊಳ್ಳುತ್ತೇವೆ ಎಂದು ಅವರು ಸವಾಲು ಹಾಕಿದರು. ಮತೀಯ ಆಧಾರಿತ ಶೇ 4 ಮೀಸಲ...
‘ಮತೀಯವಾಗಿ ಮೀಸಲಾತಿಯನ್ನು ಅಂಬೇಡ್ಕರ್ ಅವರೇ ವಿರೋಧಿಸಿದ್ದರು, ಸುಪ್ರೀಂ ಕೋರ್ಟ್ ಕೂಡಾ ಆಕ್ಷೇಪಿಸಿತ್ತು’

‘ಮತೀಯವಾಗಿ ಮೀಸಲಾತಿಯನ್ನು ಅಂಬೇಡ್ಕರ್ ಅವರೇ ವಿರೋಧಿಸಿದ್ದರು, ಸುಪ್ರೀಂ ಕೋರ್ಟ್ ಕೂಡಾ ಆಕ್ಷೇಪಿಸಿತ್ತು’

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದಕ್ಕೆ ಬಿಜೆಪಿಯ ವಿರೋಧವಿದೆ ಎಂದು ವಿಧಾನಪರಿಷತ್ತಿನಲ್ಲಿ ಶಾಸಕ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ.ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ… pic.twitter.com/kbIxdbPS3C— BJP Karnataka (@BJP4Karnataka) March 17, 2025 ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ ಎಂದು ಅವರು ರಾಜ್ಯ ಸರ್ಕಾರದ ಗಮನಸೆಳೆದಿದ್ದಾರೆ. ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ...
‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿಯನ್ನು ಗ್ರೇಟರ್ ಬೆಂಗಳೂರು ಹೆಸರಲ್ಲಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 'UDAYA NEWS' ಈಗ ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ ಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾರ್ಮಿಕವಾಗಿ ಹೇಳಿದ್ದಾರೆ. ಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ. ಗ್ರೇಟರ್ ಬೆಂಗಳೂರು ಎಂದು ವಿಭಾಗಿಸುವ ಮೂಲಕ ಲೂಟಿ ಹೊಡೆಯುವವರಿಗೆ ಅವಕಾಶ… pic.twitter.com/TT7yT44Ys2 — BJP Karnataka (@BJP4Karnataka) March 12, 2025 ಗ್ರೇಟರ್ ಬೆಂಗಳೂರು ...
ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ; ಸಮಗ್ರ ತನಿಖೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹ

ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ; ಸಮಗ್ರ ತನಿಖೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಚಿತ್ರದುರ್ಗ: ದೇವನಹಳ್ಳಿ ಕೆಐಎಡಿಬಿ ಕರ್ಮಕಾಂಡ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಬಿಜೆಪಿ ಆಗ್ರಹಿಸಿದೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ಭೂ ಕರ್ಮಕಾಂಡಗಳ ಬಗ್ಗೆ ಆಕ್ರೋಶ ಹೊರಹಾಕಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ KIADB ಭೂ ಸ್ವಾದೀನ ಪ್ರಕ್ರಿಯೆಯಲ್ಲಿ ಹಗರಣ ನಡೆದಿದ್ದು, ಈ ಬಗ್ಗೆ ಸಿಟಿಜನ್ ರೈಟ್ಸ್ ಫೌಂಡೇಷನ್' ಅಧ್ಯಕ್ಷ ಕೆ.ಎ.ಪಾಲ್ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು. 1984 ರಲ್ಲಿ ಇದೇ ಭೂಮಿಯನ್ನು ಉಳುಮೆ ಮಾಡಲು ಸರ್ಕಾರ ಅವಕಾಶ ಕೊಟ್ಟಿಲ್ಲ. ಆದರೆ ಕೆಐಎಡಿಬಿ ಭೂಸ್ವಾದೀನ ಪ್ರಕ್ರಿಯೆ ವೇಳೆ ಜಮೀನಿಗೆ ಮಾಲೀಕರನ್ನು ಹುಟ್ಟುಹಾಕಲಾಗಿದೆ. ಬೇನಾಮಿ ರೀತಿ ಜಮೀನು ಪರಿಹಾರದ ರೂಪದಲ್ಲಿ ಹಣ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸಿ.ಟಿ.ರವಿ ಆಗ್ರಹಿಸಿದರು. ಸಿದ್ದರಾಮಯ್ಯ ಸರ್ಕಾರವು ಈ ಭೂಮಿಯನ್ನು ಕೊಟ್ಟಿದ್ದೇ ಆಗಿದ್ದರೇ, ಅದೂ ಕೂಡಾ ಭಾರೀ ಅಕ್ರಮ ಆಗುತ್ತದೆ. ಹಾಗಾಗಿ KIADBಯಿಂದಲೂ ...