Thursday, January 29

Tag: C.V. Devaraj- Karnataka Vokkaliga Federation

ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು: ಸಿ.ವಿ.ದೇವರಾಜ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತಮಿಳಿನಿಂದಲೆ ಕನ್ನಡ ಹುಟ್ಟಿದೆ ಎಂದು ಅಜ್ಞಾನ ಮತ್ತು ಅವೈಜ್ಞಾನಿಕ ಹೇಳಿಕೆ ನೀಡಿದ ಬಹಭಾಷಾ ನಟ ಕಮಲ್ ಹಾಸನ್ ಕ್ಷಮೆ ಕೇಳುವಂತೆ ಪದೇ ಪದೇ ದುಂಬಾಲು ಬೀಳುವುದು ಕನ್ನಡಿಗರ ಸ್ವಾಭಿಮಾನಕ್ಕೆ ಅಪಮಾನ ಮಾಡಿದಂತೆ ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್ ಹೇಳಿದ್ದಾರೆ. ನಟ‌ ಕಮಲ್ ಹಾಸನ್ ಕನ್ನಡ ಭಾಷೆಯ ಇತಿಹಾಸ ತಿಳಿಯದೆ ನೀಡಿದ ಹೇಳಿಕೆ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯವ ಅಸಮಧಾನ ವ್ಯಕ್ತಪಡಿಸಿದೆ. ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್, ಇತ್ತೀಚಿನ ವರ್ಷಗಳಲ್ಲಿ ಹಲವಾರು ಚಿತ್ರ ನಿರ್ಮಿಸಿ ಸೋತು ಸುಣ್ಣವಾಗಿರುವ ನಟ ಕಮಲ್ ಹಾಸನ್ ಬಿಡುಗಡೆಯಾಗಲಿರುವ ತನ್ನ ಹೊಸ ಚಿತ್ರಕ್ಕೆ ಉಚಿತ ಪ್ರಚಾರ ಪಡೆಯುವ ಉದ್ದೇಶದಿಂದ ಕನ್ನಡ ‌ಭಾಷೆಯ ಕುರಿತು ಅಜ್ಞಾನದ ಹೇಳಿಕೆ ನೀಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಆ ಮೂಲಕ ತನ್ನ ಚಿತ್ರಕ್ಕೆ ಉಚಿತ ಪ್ರಚಾರ ಪಡೆಯುವ ಉದ್ದೇಶವನ್ನು ಯಶಸ್ವಿಯಾಗಿ ಇಡೇರಿಸಿಕೊಂಡಿದ್ದಾರೆ ಎಂಡಿದ್ದಾರೆ. ಕನ್ನಡಿಗರು ಮತ್ತು ಕನ್ನಡ ಪರ ಸಂಘಟನೆಗಳು ಕಮಲ್‌ ಹಾಸನ್ ಕ್ಷಮೆ ಕೇಳುವಂ...