
ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ
ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸೈಟ್ ಹಿಂದಿರುಗಿಸಿದರೂ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿಗೆ ಸಿದ್ದು ಸಂಪುಟದ ಸಚಿವರು ಎದಿರೇಟು ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ದದ ಡಿನೊಟಿಫಿಕೇಶನ್ ಹಗರಣ ಆರೋಪ ಮುಂದಿಟ್ಟು ಕಾಂಗ್ರೆಸ್ ನಾಯಕರು ಬಿಜೆಪಿಯನ್ನೂ ಮುಜುಗರಕ್ಕೆ ಸಿಲುಕಿಸುವ ಪ್ರಯತ್ನ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವರಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ನಡೆಸಿದ ಜಂಟಿ ಸುದ್ದಿಗೋಷ್ಠಿ ವಿದ್ಯಮಾನಗಳ ಕೇಂದ್ರಬಿಂದುವಾಯಿತು.
ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, ತಪ್ಪು ಮಾಡಿರುವ ಕಾರಣ ವಾಪಸ್ ನೀಡಿದ್ದೀರಿ ಎಂದು ಆರೋಪ ಮಾಡಿದ್ದಾರೆ ಎಂದರು.
ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಭೂ ಹಗರಣದ ಬಗ್ಗೆ ದಾಖಲೆ ಸಮೇತ ಮುಂದೆ ಇಟ್ಟ ಸಚಿವರು, ಸರ್ವೇ ನಂಬರ್ ...