Friday, January 30

Tag: Central District Youth Congress Ranjeeth

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಹೆಚ್.ಎಸ್.ಮಂಜುನಾಥ್ ಗೌಡ ಮಾತನಾಡಿ , ಕೇಂದ್ರ ಬಿಜೆಪಿ ಸರ್ಕಾರ ದೇಶದ 140ಜನರ ಹೊಟ್ಟೆಯ ಮೇಲೆ ಬರೆ ಏಳೆದಿದ್ದಾರೆ, ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿಜಿ.ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ರಂಜೀತ್, ದಕ್ಷ್ಮಿಣ ಜಿಲ್ಲಾ ಮೌನೀಶ್ ರೆಡ್ಡಿ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಶಂಶಾಕ್ ಗೌಡ ರವರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು....