Thursday, March 19

Tag: Chikkamagaluru Medical College

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿನ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅತಿ ಶೀಘ್ರವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ಗುರುವಾರ ನಡೆದ ವಿಧಾನ ಸಭೆ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ.ತಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, ಮಲೆನಾಡು ಭಾಗದ ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ತೆರೆದ ಬಾವಿ ನಿರ್ಮಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು.ಕಳೆದ ಬಿಜೆಪಿ ಸರ್ಕಾರ ಚಿಕ್ಕಮಗಳೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಶಂಕುಸ್ಥಾಪನೆ ನೇರವೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ 100 ಕೋಟಿ ರೂ. ಹಣ ನೀಡಿದೆ. ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. 10 ಬೋರ್ ವೆಲ್ ಕೊರೆದರೂ ನೀರು ಸಿಗ...