
ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..
ಬೆಂಗಳೂರು: ಆಗಾಗ್ಗೆ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರತ್ತ ಬೆರಳು ತೋರಿಸುವ ಮುನ್ನ ತಮ್ಮನ್ನು ತಾವೇ ನೋಡಿಕೊಳ್ಳಲಿ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಧ್ಯಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಬಾಬು, ಅನಾದಿ ಕಾಲದಿಂದಲೂ ಬಿಜೆಪಿ-ಆರೆಸ್ಸೆಸ್ ನಾಯಕರು ಸಂವಿಧಾನ ಬದಲಾವಣೆ ಬಾಗೆ ಹೇಳಿಕೊಂಡಿರುವ ಸನ್ನಿವೇಶಗಳ ಬಗ್ಗೆ ಗಮನಸೆಳೆದರು. ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ. ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ ಮಾಡುವ ಹೇ...