Friday, January 30

Tag: crf- Citizen Right Foundation

ಸಿಎಂ ಸಹಿ ಫೋರ್ಜರಿ ಮಾಡಿರೋದು ಈ ಅಧಿಕಾರಿ? ರಾಜ್ಯಪಾಲರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ದೂರು

ಸಿಎಂ ಸಹಿ ಫೋರ್ಜರಿ ಮಾಡಿರೋದು ಈ ಅಧಿಕಾರಿ? ರಾಜ್ಯಪಾಲರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ದೂರು

Others
ಬೆಂಗಳೂರು: ಸಾವಿರಾರು ಕೋಟಿ ರೂ ಮೌಲ್ಯದ ಜಮೀನನ್ನು ಅಧಿಕಾರಿಗಳು ಮುಖ್ಯಮಂತ್ರಿ ಸಹಿ ಫೋರ್ಜರಿ ಮೂಲಕ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಬಗ್ಗೆ ಹೈಕೋರ್ಟ್ ಪರಿವೀಕ್ಷಣೆಯಲ್ಲಿ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಿಟಿಜನ್ ರೈಟ್ಸ್ ಫೌಂಡೇಶನ್ ರಾಜ್ಯಪಾಲರಿಗೆ ದೂರು ನೀಡಿದೆ. ಸಾರ್ವಜನಿರ ಸಮಸ್ಯೆಗಳಿಗೆ ಸ್ಪಂಧಿಸುತ್ತಾ, ಜನರ ಹಿತಾಸಕ್ತಿ ಸಂಬಂಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ, ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಕಾನೂನು ಹೋರಾಟ ನಡೆಸುತ್ತಾ ಸಾಮಾಜಿಕ ಹಿತಾಸಕ್ತಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ 'ಸಿಟಿಜನ್ ರೈಟ್ಸ್ ಫೌಂಡೇಷನ್', ಇದೀಗ ರಾಜ್ಯ ಸರ್ಕಾರದ ಅಧಿಕಾರಿಗಳು ಮುಖ್ಯಮಂತ್ರಿಯ ಸಹಿಯನ್ನು ಫೋರ್ಜರಿ ಮಾಡಿದ್ದಾರೆ ಎಂಬ ಆರೋಪ ಕುರಿತಂತೆ ತಮ್ಮ ಗಮನಸೆಳೆಯಲು ಬಯಸಿದ್ದು, ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ನಿರ್ದೇಶಿಸಲು ಕೋರಿ ಮನವಿ ಸಲ್ಲಿಸಿದೆ. ರಾಜ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಯಿ ವೆಂಕಟೇಶ್ವರ ಮಿನರಲ್ಸ್'ಗೆ ಅಕ್ರಮವಾಗಿ ಗಣಿ ಗುತ್ತಿಗೆ ನೀಡಿರುವ ಆರೋಪಗಳು ಕೇಳಿಬಂದಿದ್ದು, ಈ ಪ್ರಕರಣದಲ್ಲಿ ತಮ್ಮ ತಪ್ಪಿಲ್ಲ ಎಂದು ...