Saturday, December 6

Tag: Dr. Sharan Prakash Patil

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಅತಿ ಶೀಘ್ರವಾಗಿ ಜಿಟಿಸಿಸಿ ಸ್ಥಾಪನೆ

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಅತಿ ಶೀಘ್ರವಾಗಿ ಜಿಟಿಸಿಸಿ ಸ್ಥಾಪನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು (ಜಿಟಿಟಿಸಿ) ಆಫ್ರಿಕಾದ ನಮೀಬಿಯಾದಲ್ಲಿ ಸ್ಥಾಪಿಸುವ ಕುರಿತು ಉನ್ನತ ಮಟ್ಟದ ಮಾತುಕತೆ ನಡೆದಿದೆ. ವೃತ್ತಿಪರ ತರಬೇತಿಯಲ್ಲಿ ಭಾರತ-ಆಫ್ರಿಕಾ ಸಹಕಾರವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಆಫ್ರಿಕಾ ಇಂಡಿಯಾ ಎಕನಾಮಿಕ್ ಫೌಂಡೇಶನ್ (ಎಐಇಎಫ್) ನಮ್ಮ ಕರ್ನಾಟಕದ ಜಿಟಿಟಿಸಿಯನ್ನು ಪ್ರಮುಖ ಜ್ಞಾನ ಮತ್ತು ತಂತ್ರಜ್ಞಾನ ಪಾಲುದಾರ ಸಂಸ್ಥೆಯಾಗಿ ಮಾಡಿಕೊಳ್ಳಲು ಮುಂದೆ ಬಂದಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿದೆ. ಈ ಪ್ರಸ್ತಾವನೆ ಅತ್ಯಂತ ಸ್ವಾಗತಾರ್ಹವಾಗಿದೆ. ಈ ಚರ್ಚೆಗಳನ್ನು ಸಕ್ರಿಯವಾಗಿ ಮುಂದುವರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಉಪಕ್ರಮವು ಕರ...
ಆರ್ಥಿಕವಾಗಿ ದುರ್ಬಲರಾದವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಿ; ಕಿದ್ವಾಯಿ ಅಧಿಕಾರಿಗಳಿಗೆ ಸೂಚನೆ

ಆರ್ಥಿಕವಾಗಿ ದುರ್ಬಲರಾದವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಿ; ಕಿದ್ವಾಯಿ ಅಧಿಕಾರಿಗಳಿಗೆ ಸೂಚನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ. ಬಡರೋಗಿಗಳ ಆರ್ಥಿಕ ಹೊರೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, ಅಂತಿಮ ಆರೋಗ್ಯ ತನಿಖಾ ವರದಿಗಳು ನೀಡುವವರೆಗೆ ಅಂತಹ ರೋಗಿಗಳನ್ನು ಆಸ್ಪತ್ರೆಯ ವಾರ್ಡ್‌ ಗಳಲ್ಲಿ ಒಳರೋಗಿಗಳಾಗಿ ಸೇರಿಸಿಕೊಳ್ಳುವಂತೆ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ (ಕೆಎಂಐಒ) ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕೆಎಂಐಒದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ದೇಶನವನ್ನು ಮೊದಲು ನೀಡಲಾಗಿತ್ತಾದರೂ, ಶುಕ್ರವಾರ ಡಾ.ಪಾಟೀಲ್ ಅವರು ಸಂಸ್ಥೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕೃತವಾಗಿ ಆದೇಶ ಹೊರಡಿಸಿ ಜಾರಿಗೆ ತರಲಾಯಿತು. ಪರಿಶೀಲನೆಯ ಸಮಯದಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾಗಿದ್ದರೂ, ಆಸ್ಪತ್ರೆಯ ಹಾಸಿಗೆಗಳು ಶೇ...
ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ಘೋಷಣೆ ಮಾಡಿದಂತೆ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಪದವೀಧರರಿಗೆ ಯುವನಿಧಿ ಗ್ಯಾರಂಟಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ನೀಡಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಸೋಮವಾರದ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿಯ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಕೊಟ್ಟ ವಾಗ್ದಾನದಂತೆ ನಡೆದುಕೊಳ್ಳುತ್ತೇವೆ. ಚುನಾವಣೆಗೂ ಮುನ್ನ ಜನತೆಗೆ ಯಾವ ಭರವಸೆಯನ್ನು ಕೊಟ್ಟಿದ್ದೇವೋ ಅವೆಲ್ಲವನ್ನೂ ಈಡೇರಿಸಲು ನಾವು ಬದ್ಧರಾಗಿದ್ದೇವೆ. ಯುವನಿಧಿ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ವದಂತಿಗಳಿಗೆ ತೆರೆ ಎಳೆದರು. ಕೆಲವು ತಾಂತ್ರಿಕ ಕಾರಣಗಳಿಂದ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ನೆರವು ವಿಳಂಬವಾಗಿರಬಹುದು. ಹಾಗೆಂದು ಇದನ್ನು ಸ್ಥಗಿತ ಮಾಡುತ್ತೇವೆ ಎಂದು ಯಾರೂ ಭಾವಿಸಬೇಕಾಗಿಲ್ಲ. ಅನುದಾನದ...
ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ. ಗುರುವಾರ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಕೇಶವಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್‌ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಇಬ್ಬರು ವೈದ್ಯರು ಮಾತ್ರ ಅರ್ಜಿ ಹಾಕಿದ್ದರು ಎಂದರು. ತಾಲೂಕು ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಿಲ್ಲ. ಹಾಗೆಯೇ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಸೂಪರ್ ಸ್ಪೆಷಾಲಿಟಿ ಸೌಲಭ್ಯಕ್ಕಾಗಿ ಮಂಗಳೂರು ಅಥವಾ ಗೋವಾಕ್ಕೆ ಹೋಗಬೇಕಾದ ಪರಿಸ್ಥಿತಿಯಿ...
ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಏನಿದು ಸಚಿವರೇ? ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ ದೂರು.. ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಕ್ರಮಗಳ ಬೆನ್ನತ್ತಿರುವ ಸಿಟಿಜನ್ ಸಿಟಿಜನ್ ರೈಟ್ಸ್ ಫೌಂಡೇಷನ್, ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮ ಪ್ರವೇಶ, ನರ್ಸಿಂಗ್ ಕಾಲೇಜುಗಳ ವಿಚಾರದಲ್ಲಿನ ಭ್ರಷ್ಟಾಚಾರಗಳ ವಿರುದ್ದ ಸರಣಿ ದಾವೆಗಳ ಮೂಲಕ ಕಾನೂನು ಸಮರವನ್ನು ಬಿರುಸುಗೊಳಿಸಿದೆ. ಇದೀಗ RGUHS ಸೆನೆಟ್ ಸದಸ್ಯರ ಚುನಾವಣೆ ಅಕ್ರಮ ವಿರುದ್ದ ಕಾನೂನು ಹೋರಾಟಕ್ಕಿಳಿದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಸಲ್ಲಿಸಿರುವ ದೂರು ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ. ಸೆನೆಟ್ ಚುನಾವಣಾ ಅಕ್ರಮ ಆರೋಪವು ಕೋಲಾಹಲ ಸೃಷ್ಟಿಸಿದ್ದು, ರಾಜ್ಯಪಾಲರು ಫಲಿತಾಂಶವನ್ನು ತ...
ನಿಮ್ಹಾನ್ಸ್: ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ

ನಿಮ್ಹಾನ್ಸ್: ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಗುರುತಾಗಿರುವ ರಾಜಧಾನಿ ಬೆಂಗಳೂರಿನ ನಿಮ್ಹಾನ್ಸ್'ನ ಸುವರ್ಣ ಮಹೋತ್ಸವ ಸಮಾರಂಭ ಗಮನಸೆಳೆಯಿತು. ಬೆಂಗಳೂರಿನ ನಿಮ್ಹಾನ್ಸ್ ಆವರಣದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಆರೋಗ್ಯ ಸಚಿವರಾದ ಜಗತ್ ಪ್ರಕಾಶ್ ನಡ್ಡಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. #HealthForAll President of India @rashtrapatibhvn Addresses Golden Jubilee Celebrations of #NIMHANS, Bengaluru in the presence of Shri @JPNadda, Union Health Minister and Shri @siddaramaiah, Chief Minister of Karnataka The dedication displayed by faculty members, students and… pic.twitter.com/jGHh0XPHKf — Ministry of Health (@MoHFW_INDIA) January 3, 2025   ಸಮಾರಂಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆ...
ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ. ಮಹಿಳಾ ಆರೋಗ್ಯ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ಡಾ.ಪಾಟೀಲ್ ಸೂಚನೆ ನೀಡಿದರು. "ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಬರವಣಿಗೆಯಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷತಾ ಶಿಷ್ಟಾಚಾರ ಕ್ರಮಗಳನ್ನು ಪರಿ...
ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆನಡೆಸಿದೆ. ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು. ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈ...