
ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು
ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು.
ಸಿಆರ್‌ಪಿಸಿ ಕಲಂ 321 ರಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಕೇಸ್ ವಾಪಸ್ ಪಡೆಯಲು ಅವಕಾಶವಿದೆ ಎಂದ ರಮೇಶ್ ಬಾಬು, ಕೋಮುದ್ವೇಷ ಹರಡುವಿಕೆ, ದ್...