
ಉಚಿತ ಬಸ್‌ಪಾಸ್ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!
ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ನಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ 'X'ನಲ್ಲಿ ಸಿಎಂ ಸಿದ್ದರಾಮಯ್ಯ ಹಂಚಿಕೊಂಡ ಮಾಹಿತಿ ಹೀಗಿದೆ:
ಉಚಿತ ಬಸ್‌ಪಾಸ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು ಎಂದವರು ಮಾಹಿತಿ ನೀಡಿದ್ದಾರೆ.
ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು....