
KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಸಿಕ್ಕಿವೆ. 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024ಯನ್ನು KSRTC ಪಡೆದುಕೊಂಡಿದೆ.
AdWorld Showdown ಪ್ರಶಸ್ತಿಗಳು :
ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ- ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ
ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ.
ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ
ಪಲ್ಲಕ್ಕಿ ಬಸ್ಸುಗಳ -ಅತ್ಯುತ್ತಮ ಗ್ರಾಹಕ ಸ್ವೀಕೃತಿ
ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ
ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ವರ್ಷದ ಅತ್ಯುತ್ತಮ ಬ್ರ್ಯಾಂಡ್
ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. PRSI ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿದೆ.
ನಿ...