Thursday, January 29

Tag: G.S.Sangreshi

BBMP ಹಾಗೂ ತಾ.ಪಂ., ಜಿ.ಪಂ ಚುನಾವಣೆ ವಿಳಂಬ; ಸರ್ಕಾರಕ್ಕೆ ಚಾಟಿ ಬೀಸಿದ ಚುನಾವಣ ಆಯುಕ್ತ ಜಿ.ಎಸ್‌. ಸಂಗ್ರೇಶಿ

BBMP ಹಾಗೂ ತಾ.ಪಂ., ಜಿ.ಪಂ ಚುನಾವಣೆ ವಿಳಂಬ; ಸರ್ಕಾರಕ್ಕೆ ಚಾಟಿ ಬೀಸಿದ ಚುನಾವಣ ಆಯುಕ್ತ ಜಿ.ಎಸ್‌. ಸಂಗ್ರೇಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಿತ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಹಕರಿಸದ ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್‌. ಸಂಗ್ರೇಶಿ ಛಾಟಿ ಬೀಸಿದ್ದಾರೆ. 2025ರ ಮಾರ್ಚ್‌ ಅಂತ್ಯದ ವೇಳೆಗೆ ಚುನಾವಣೆ ನಡೆಯದಿದ್ದರೆ 15ನೇ ಹಣಕಾಸು ಆಯೋಗದಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ 2,100 ಕೋಟಿ ರೂಪಾಯಿ ಅನುದಾನ ಕೈತಪ್ಪಲಿದೆ ಎಂದು ಅವರು ಎಚ್ಚರಿಕೆಯ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್‌. ಸಂಗ್ರೇಶಿ, ಈ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುವಂತೆ ಮಾಡಿರುವ ಸಲಹೆ ಗಮನಸೆಳೆದಿದೆ. 15ನೇ ಹಣಕಾಸು ಆಯೋಗ ದಲ್ಲಿ 2020-21ನೇ ಸಾಲಿನಿಂದೀಚೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2,100 ಕೋಟಿ ರೂಪಾಯಿ ಅನುದಾನ ಬರಬೇಕಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇದ್ದರೆ ಮಾತ್ರ ಅನುದಾನ ಬಿಡುಗಡೆ ಎಂಬ ಹಣಕಾಸು ಆಯೋಗದ ಷರತ್ತು ಇದೆ. ಆದರೆ ಬಿಬಿಎಂಪಿ ಹಾಗೂ ಜಿ.ಪಂ.-ತಾ.ಪಂ.ಗಳಿಗೆ 4 ವರ್ಷಗಳಿಂದ ಚುನಾವಣ...