Wednesday, June 25

Tag: Greater Mysuru – Mysuru City Map- Mysore city map

ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್‌

ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್‌

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಯಿತು. ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್‌ ಪುನರ್‌ ವಿಂಗಡನೆ (Delimitation) ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಸೂಚಿಸಿದರು. ಮೈಸೂರು ಮಹಾನಗರ ಪಾಲಿಕೆ...