Saturday, December 6

Tag: Guidelines for safety of women doctors

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆನಡೆಸಿದೆ. ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು. ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈ...