Tuesday, June 24

Tag: H.K.Patil

ಬಿಜೆಪಿ ನಾಯಕರಿಗೆ ಶಾಕ್..! ಶೇ.40 ಕಮಿಷನ್ ಆರೋಪ ಬಗ್ಗೆ ತನಿಖೆಗೆ SIT ರಚಿಸಲು ಸಂಪುಟ ನಿರ್ಧಾರ

ಬಿಜೆಪಿ ನಾಯಕರಿಗೆ ಶಾಕ್..! ಶೇ.40 ಕಮಿಷನ್ ಆರೋಪ ಬಗ್ಗೆ ತನಿಖೆಗೆ SIT ರಚಿಸಲು ಸಂಪುಟ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಕೈಗೊಂಡಿರುವ ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದೆ. ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಶೇ. 40 ರಷ್ಟು ಕಮಿಷನ್ ಆರೋಪಗಳ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ತನಿಖಾ ವರದಿ ಆಧರಿಸಿ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಾ ತೀರ್ಮಾನಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ ಆರೋಪದ ತನಿಖೆಗೆ ರಚನೆಯಾಗಿದ್ದ ನ್ಯಾ. ನಾಗಮೋಹನ್ ದಾಸ್ ವಿಚಾರಣಾ ಆಯೋಗ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಯಿತು ಎಂದು ತಿಳಿಸಿದರು. ಸಂಪುಟ ಸಭೆಯು ವಿಚಾರಣಾ ಆಯೋಗದ ವರದಿ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಲು ನಿರ್ಧಾರ ಮಾಡಿದೆ. ಎಸ್‌ಐಟಿ ಎರಡು ತಿಂಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದರು....
‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ

‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಗದಗ್ ಕೋ-ಆಪರೇಟಿವ್ ಕಾಟನ್ ಸೇಲ್ಸ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಆದರ್ಶ ನಾಯಕರಾಗಿದ್ದ ಕೆ.ಹೆಚ್.ಪಾಟೀಲ್ ಅವರನ್ನು ಸ್ಮರಿಸಿದ ಡಿ.ಕೆ.ಶಿವಕುಮಾರ್, ಸಹಕಾರ ರಂಗದ ಭೀಷ್ಮ ಕೆ.ಹೆಚ್.ಪಾಟೀಲ್ ಅವರ ಜನಪರ ಕಾಳಜಿಯ ನಿದರ್ಶನಗಳು ನಮ್ಮ ಮುಂದಿವೆ. ಅವರು ಚುನಾವಣೆಯಲ್ಲಿ ಸೋತಾಗ ಕುಗ್ಗದೆ, ಅಧಿಕಾರ ಸಿಕ್ಕಾಗ ಹಿಗ್ಗದೆ ದಕ್ಷತೆಯಿಂದ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ದೃಢ ನಿರ್ಧಾರಗಳನ್ನು ಕೈಗೊಂಡು, ಸಹಕಾರಿ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದರು. ಕೆ.ಹೆಚ್...
ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರನ್ನು ನಾಯಕರು ಮಹಾಮಾನವತಾವಾದಿ ಎಂದು ಬಣ್ಣಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು ಎಂದು ಸ್ಮರಿಸಿದರು. ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು ಸೇರಿದ್ದೇವೆ. ಪಾಟೀಲರ ಬದುಕು, ಚಿಂತನೆ, ಆದರ್ಶ ಬೇರೆಯವರ ಬದುಕಿಗೆ ದಾರಿ ದೀಪವಾಗಲಿ. ನಾವು ಇತ್ತೀಚೆಗೆ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನಡೆಸಿದ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಆಚರಣೆ ...
ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್

ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹುಬ್ಬಳ್ಳಿ: ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಕ್ಸಪೋವನ್ನು ಉದ್ಘಾಟಿಸುವರು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಮಾಜಿ ಸಂಸದರಾದ ಎಂ.ಎಂ.ಹಿಂಡಸಗೇರಿ, ಮುಖಂಡರಾದ ಮಹೇಂದ್ರ ಸಿಂಘಿ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಕೆ.ಪಾಟೀಲ್, ಎಕ್ಸ್‌ಪೋ ಬಗ್ಗೆ ಮಾಹಿತಿ ಹಂಚಿಕೊಂಡರು, ಫೆಬ್ರವರಿ 27 ಮತ್ತು 28 ರಂದು 2 ದಿನಗಳ ಕಾಲ ವ್ಯವಹಾರಿಕ ಸಭೆಗಳು ನಡೆಯಲಿವೆ. ನಮ್ಮ ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, ಸ್ಮಾರಕಗಳು ಇವೆ. 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿದ್ದು, ಅವುಗಳಲ್ಲಿ 800 ಕ್ಕೂ ಹೆಚ್ಚು ಸ್ಮಾರಕಗಳನ್ನು ರಕ್ಷಿತ ಸ್ಮಾರಕಗಳಾಗಿ ಘೋಷಿಸಲಾಗಿದೆ....
ಪ್ರಾಸಿಕ್ಯೂಷನ್ ಅನುಮತಿ ವಿಚಾರ; ಇದೀಗ ಹೆಚ್ಡಿಕೆ, ಜೊಲ್ಲೆ, ನಿರಾಣಿ ವಿರುದ್ದದ ಪ್ರಕರಣಗಳು ಮುಂಚೂಣಿಗೆ

ಪ್ರಾಸಿಕ್ಯೂಷನ್ ಅನುಮತಿ ವಿಚಾರ; ಇದೀಗ ಹೆಚ್ಡಿಕೆ, ಜೊಲ್ಲೆ, ನಿರಾಣಿ ವಿರುದ್ದದ ಪ್ರಕರಣಗಳು ಮುಂಚೂಣಿಗೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಹಾಗೂ ಹಿಂದಿನ ಬಿಜೆಪಿ ಸರ್ಕಾರದದಲ್ಲಿ ಸಚಿವರಾದ ಅಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಅವರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವ ಪೊಲೀಸ್ ಆಫೀಸರ್ ಕೂಡ ಅನುಮತಿ ಕೇಳದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮದ ಹಿಂದಿನ ಅಜೆಂಡಾ ಏನು ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ. ಮುಡಾ ನಿವೇಶನ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ್ ರೆಡ್ಡಿ ವಿರುದ್ದದ ಪ್ರಕರಣಗಳು ಮುನ್ನಲೆಗೆ ಬಂದಿವೆ. ಈ ನಾಯಕರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ ಹಾಗೂ ಕಂದಾಯ ಮಂತ್ರಿ ಕೃಷ್ಣಬೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈ ನಾಯಕರು ರಾಜ್ಯಪಾಲರ ಕ್ರಮದ ಬಗ್ಗೆ ಆಕ್ಷೇಪ ...