Saturday, December 6

Tag: Health and Family Welfare Department

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಲಬುರಗಿ: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ಸಚಿವರು ಈ ವಿಷಯ ತಿಳಿಸಿದ್ದಾರೆ. ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ವೈದ್ಯರು ಗಮನ ಸೆಳೆದರು. ಆಗ ಸಚಿವರು ಮಾತನಾಡಿ,...