Tag: High Court

  • ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ

    ಬೆಂಗಳೂರು: ನಟ ದರ್ಶನ್ ತೂಗುದೀಪಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ದರ್ಶನ್​ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕೋರಿಕೆಯನ್ನು ಮನ್ನಿಸಿ ಹೈಕೋರ್ಟ್ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
    ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿರುವ ನಟ ದರ್ಶನ್​ಗೆ ಹೈಕೋರ್ಟ್ ಆದೇಶದಿಂದ ರಿಲೀಫ್ ಸಿಕ್ಕಿದೆ.

    ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಜಾಮೀನು ಪಡೆದ ಬಳಿಕ ಪ್ರತಿ ವಾರವೂ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು. ಜೊತೆಗೆ ದರ್ಶನ್ ಪಾಸ್ಪೋರ್ಟನ್ನು ಕೋರ್ಟ್ ಸುಪರ್ದಿಗೆ ನೀಡಬೇಕು ಎಂದು ಸೂಚಿಸಿದೆ. ಈ ಜಾಮೀನು ಅವಧಿಯಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.

  • ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

    ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕನಸು ಭಗ್ನವಾಗಿದೆ.

    ಸುಮಾರು ತಿಂಗಳಿಂದ ಸೆರೆವಾಸದಲ್ಲಿರುವ ಜೆಡಿಎಸ್‌ನ ಉಚ್ಛಾಟಿತ ನಾಯಕ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.