Saturday, December 6

Tag: ‘honey trap’

ನಾಯಕರ ವೀಕ್ನೆಸ್ ಬಗ್ಗೆ ಸಂಶಯ..! ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

ನಾಯಕರ ವೀಕ್ನೆಸ್ ಬಗ್ಗೆ ಸಂಶಯ..! ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ನಾಯಕರಿಂದ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಈ ವಿಚಾರವು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಯಕರು ಆಗ್ರಹಿಸಿದ್ದಾರೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಇದೇ ವೇಳೆ, ಹನಿಟ್ರ್ಯಾಪ್'ಗೆ ಒಳಗಾಗುವರ ವೀಕ್ನೆಸ್ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಕೂಡಾ ಗಮನಸೆಳೆದಿದೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಹನಿಟ್ರ್ಯಾಪ್ ಸುಮ್ಮನೆ ಆಗುತ್ತಾ? ನಾವು ಹಲೋ ಅಂದ್ರೆ ಅವರು ಹಲೋ ಅಂತಾರೆ, ನೀವು ಬಾಯ್ ಅಂದ್ರೆ ಅವರು ಬಾಯ್ ಅಂತಾರೆ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಹನಿಟ್ರ್ಯಾಪ್ ಅದವರ ವೀಕ್ನೆಸ್ ಬಗ್ಗೆ ಬೊಟ್ಟು ಮ...
ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಹನಿಟ್ರ್ಯಾಪ್ ಕೋಲಾಹಲ ಕುರಿತಂತೆ ಆರಂಭದಿಂದಲೂ ಆಕ್ರೋಶ ಹೊರಹಾಕುತ್ತಿದ್ದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ. ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ ಎಂದು ಗಮನಸೆಳೆದಿದ್ದಾರೆ. ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ.ಕಳೆದ 20 ವರ್ಷಗಳಿಂದಲೂ ಹನಿಟ್ರ್ಯಾಪ್ ಆಗಿವೆ. ಈ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಅವರೌ ಪ್ರತಿಪಾದಿಸಿದ್ದಾರೆ....
ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ. ಈ ನಡುವೆ ಹನಿಟ್ರ್ಯಾಪ್ ಕುರಿತಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೇಗ್ವೆದುಕೊಂಡಿರುವ ಬಿಜೆಪಿ ನಾಯಕರು ವಿಧಾನ ಸಭೆ ಹಾಗೂ ವಿಧಾನ ಪರಿಷತ್ತುಗಳಲ್ಲಿ ಗದ್ದಲ ಎಬ್ಬಿಸಿವೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ 17 ಶಾಸಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು. ಇದರ ಬಗ್ಗೆ ಅಂದು ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಹಾಗಿದ್ದರೆ ಇಂದು ಈ ವಿಷಯದಲ್ಲಿ ಚರ್ಚೆಯ ಅವಶ್ಯಕತೆ ಇದೆಯೇ? ಬಿಜೆಪಿಯವರಿಗೆ ಅಂದು ಇಲ್ಲದ ನೈತಿಕತೆಯ ಪ್ರಶ್ನೆ ಇಂದು ಹೇಗೆ ಹುಟ್ಟಿಕೊಂಡಿತು? - @PriyankKharge pic.twitter.com/H4QfxdojoM — Karnataka Congress (@INCKarnataka) March 21, 2025 ಬಿಜೆಪಿಯವರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಹ...
‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದುಮಾಡುತ್ತಿದೆ. ಈ ಬಗ್ಗೆ ತ್ಪ್ರತಿಪಕ್ಷಗಳು ತನಿಖೆಗೆ ಪಟ್ಟುಹಿಡಿದಿವೆ. ಇದೇ ವೇಳೆ, ಆಡಳಿತಾರೂಢ ಕಾಂಗ್ರೆಸ್ ನಾಯಕರ ನಡುವಿನ ಹನಿಟ್ರ್ಯಾಪ್ ಗುದ್ದಾಟ ಬಗ್ಗೆ ಪ್ರತಿಪಕ್ಷ ಬಿಜೆಪಿ ವ್ಯಂಗ್ಯವಾಡಿದೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಹೆಚ್.ಸಿ.ಮಹದೇವಪ್ಪ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಡಾ.ಪರಮೇಶ್ವರ್ ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ...