Wednesday, January 28

Tag: JP nadda

ಮಾ.21 ರಿಂದ 3 ದಿನ RSS ಪ್ರತಿನಿಧಿ ಸಭಾ ಭೈಠಕ್; ಭಗವತ್, ಅಮಿತ್ ಶಾ ಸೇರಿ ಹಲವರು ಭಾಗಿ

ಮಾ.21 ರಿಂದ 3 ದಿನ RSS ಪ್ರತಿನಿಧಿ ಸಭಾ ಭೈಠಕ್; ಭಗವತ್, ಅಮಿತ್ ಶಾ ಸೇರಿ ಹಲವರು ಭಾಗಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್ ಈ ತಿಂಗಳ 21 ರಿಂದ 23ರ ವರೆಗೆ ನಡೆಯಲಿದೆ. ಬೆಂಗಳೂರು ಹೊರವಲಯದ ಚನ್ನೇನಹಳ್ಳಿಯಲ್ಲಿ ಈ ಸಭೆ ನಡೆಯಲಿದ್ದು, ಸಂಘದ ಮುಂದಿನ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಯಲಿದೆ ಹಾಗೂ ಪ್ರಮುಖ ನಿರ್ಧಾರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು RSS ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ತಿಳಿಸಿದ್ದಾರೆ. ABPS ನಡೆಯುವ ಚನ್ನೇನಹಳ್ಳಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯುನ್ನತ ನೀತಿ ನಿರ್ಧಾರಗಳನ್ನು ನಿರೂಪಿಸುವ ಸಭೆ ಇದಾಗಿದೆ. ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳ ಕುರಿತು ವಿಮರ್ಶಾತ್ಮಕ ಚರ್ಚೆ ನಡೆಯಲಿದ್ದು, ಮುಂದಿನ ಸಂಘಟನಾ ಕಾರ್ಯತಂತ್ರಗಳ‌ ಬಗ್ಗೆ ಚರ್ಚೆಯಾಗಲಿದೆ ಎಂದರು. ಸರಸಂಘಚಾಲಕ್ ಡಾ.ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಿರಿಯ ಪದಾಧಿಕಾರಿಗಳು, ಸಂಘದ ವಿವಿಧ ಕ್ಷೇತ್ರಗಳ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಭಾಗವಹಿಸಲಿದ್ದಾರೆ ಎಂದ...
ನಿಮ್ಹಾನ್ಸ್: ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ

ನಿಮ್ಹಾನ್ಸ್: ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಗುರುತಾಗಿರುವ ರಾಜಧಾನಿ ಬೆಂಗಳೂರಿನ ನಿಮ್ಹಾನ್ಸ್'ನ ಸುವರ್ಣ ಮಹೋತ್ಸವ ಸಮಾರಂಭ ಗಮನಸೆಳೆಯಿತು. ಬೆಂಗಳೂರಿನ ನಿಮ್ಹಾನ್ಸ್ ಆವರಣದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಆರೋಗ್ಯ ಸಚಿವರಾದ ಜಗತ್ ಪ್ರಕಾಶ್ ನಡ್ಡಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. #HealthForAll President of India @rashtrapatibhvn Addresses Golden Jubilee Celebrations of #NIMHANS, Bengaluru in the presence of Shri @JPNadda, Union Health Minister and Shri @siddaramaiah, Chief Minister of Karnataka The dedication displayed by faculty members, students and… pic.twitter.com/jGHh0XPHKf — Ministry of Health (@MoHFW_INDIA) January 3, 2025   ಸಮಾರಂಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆ...