Sunday, March 15

Tag: Karnataka Caste Census Survey

ಜಾತಿ ಜನಗಣತಿ ಸಮೀಕ್ಷೆ: ವರದಿ ಜಾರಿಯ ವಿಶ್ವಾಸ ಇದೆ ಎಂದ ಕಾಂತರಾಜ್

ಜಾತಿ ಜನಗಣತಿ ಸಮೀಕ್ಷೆ: ವರದಿ ಜಾರಿಯ ವಿಶ್ವಾಸ ಇದೆ ಎಂದ ಕಾಂತರಾಜ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಶಿವಮೊಗ್ಗ: ಜಾತಿ ಜನಗಣತಿ ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಾತಿ ಜನಗಣತಿ ವರದಿ ಸೋರಿಕೆಯಾಗಿದೆ ಎಂಬ ಆರೋಪವಂತೂ ವಿವಾದದ ಬಿರುಗಾಳಿ ಎಬ್ಬಿಸಿದೆ.ಈ ನಡುವೆ, ಜಾತಿ ಜನಗಣತಿ ವರದಿ ಸೋರಿಕೆಯಾಗಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್.ಕಾಂತರಾಜ್ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಆಯಾಮಗಳಿಂದಲೂ ಜಾತಿ ಜನಗಣತಿ ಸಮೀಕ್ಷೆ ನಡೆಸಲಾಗಿದ್ದು, ವರದಿ ಅವೈಜ್ಞಾನಿಕವಾಗಿದೆ ಎಂಬ ಆರೋಪ ಸರಿಯಲ್ಲ ಎಂದರು.1931 ರ ನಂತರ ಹಿಂದುಳಿದ ವರ್ಗಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಕುರಿತು ಯಾವುದೇ ಸಮೀಕ್ಷೆಯನ್ನು ನಡೆಸಲಾಗಿಲ್ಲ, ಹೀಗಾಗಿ 2015 ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಮೀಕ್ಷೆಯನ್ನು ಕೈಗೆತ್ತಿಕೊಳ್ಳಲು ಸಮಿತಿಯನ್ನು ರಚಿಸಿದರು ಎಂದ ಎಚ್.ಕಾಂತರಾಜ್, ಆಯೋಗದ ಶಿಫಾರಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತರಲಿದ್ದಾರೆಂಬ ಭರವಸೆಯಿದೆ ಎಂದರು....