Tuesday, June 24

Tag: Karnataka State Road Transport Corporation – KSRTC

KSRTCಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ‘Governance now 11th PSU ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘PSU ನಾಯಕತ್ವ ಪ್ರಶಸ್ತಿ -2025’

KSRTCಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ‘Governance now 11th PSU ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘PSU ನಾಯಕತ್ವ ಪ್ರಶಸ್ತಿ -2025’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ದೇಶದಲ್ಲೇ ಅತ್ಯುತ್ತಮ ಸಾರಿಗೆ ಸೇವೆ ಮೂಲಕ ಜನಪ್ರಿಯತೆ ಗಳಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡಿದೆ. 'Governance now 11th PSU ರಾಷ್ಟ್ರೀಯ ಪ್ರಶಸ್ತಿ' ಮತ್ತು 'PSU ನಾಯಕತ್ವ ಪ್ರಶಸ್ತಿ -2025' ಯನ್ನು KSRTC ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಸ್ವೀಕರಿಸಿದ್ದಾರೆ. 'Governance Now' ರವರು ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ PSU ಆತ್ಮ‌ನಿರ್ಭರ್ ನಾಯಕತ್ವ ಪ್ರಶಸ್ತಿಯನ್ನು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವ ಸತೀಶ್ ಚಂದ್ರ ದುಬೆ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು ಪ್ರದಾನ‌ ಮಾಡಿದರು. KSRTC ನಿಗಮದಲ್ಲಿ 1314 ಬಸ್ಸುಗಳು ಪುನಶ್ಚೇತನಗೊಂಡಿದ್ದು, ಕರ್ನಾಟಕ ಸಾರಿಗೆ 1184 , ನಗರ ಸಾರಿಗೆ 115, ಐರಾವತ ಕ್ಲಬ್ ಕ್ಲಾಸ್ 15 ಬಸ್ಸುಗಳನ್ನು ಸಹ ಪುನಶ್ಚೇತನಗೊಳಿಸಲಾಗಿದೆ. ಈ ಮೂಲಕ ರೂ.250 ಕೋಟಿಗೂ ಹೆಚ್ಚು ಹಣ ನಿಗಮಕ್ಕೆ ಉಳಿತಾಯವಾಗಿದ್ದು, ಈ ಉಪಕ್ರ...
ಕಂಡಕ್ಟರ್ ವಿರುದ್ಧ ಸುಳ್ಳು ಪೋಕ್ಸೋ ಕೇಸ್: ಸಚಿವ ರಾಮಲಿಂಗ ರೆಡ್ಡಿ ಗರಂ; KSRTC ಸಿಬ್ಬಂದಿ ರಕ್ಷಣೆಗೆ ನಾನಿದ್ದೇನೆ ಎಂದ ಸಾರಿಗೆ ಮಂತ್ರಿ..

ಕಂಡಕ್ಟರ್ ವಿರುದ್ಧ ಸುಳ್ಳು ಪೋಕ್ಸೋ ಕೇಸ್: ಸಚಿವ ರಾಮಲಿಂಗ ರೆಡ್ಡಿ ಗರಂ; KSRTC ಸಿಬ್ಬಂದಿ ರಕ್ಷಣೆಗೆ ನಾನಿದ್ದೇನೆ ಎಂದ ಸಾರಿಗೆ ಮಂತ್ರಿ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಕಂಡಕ್ಟರ್ ವಿರುದ್ಧ ವಿರುದ್ಧ ದಾಖಲಾಗಿರುವ ಪ್ರಕರಣ ಸತ್ಯಕ್ಕೆ ದೂರವಾದದ್ದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. KSRTC ನೌಕರರ ಪರವಾಗಿ ನಿಂತಿರುವ ಸಚಿವರು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ KSRTC ಸಿಬ್ಬಂದಿ ಮೇಲಿನ ದಾಳಿ ಹಾಗೂ ನಿರ್ವಾಹಕರ ವಿರುದ್ಧ ದಾಖಲಾಗಿರುವ ಪ್ರಕರಣ ಬಗ್ಗೆ ಕಳವಳ ವ್ಯಕತಪಡಿಸಿರುವ ಸಚಿವ ರಾಮಲಿಂಗ ರೆಡ್ಡಿ. ಕಂಡಕ್ಟರ್ ವಿರುದ್ಧದ ಪೋಕ್ಸೊ ಆರೋಪಗಳು ಸುಳ್ಳು ಎಂದು ಹೇಳಿದರು. ಈ ಸುದ್ದಿಯನ್ನು 'UDAYA NEWS -ಇಂಗ್ಲೀಷ್' ಆವೃತ್ತಿಯಲ್ಲೂ ಓದಿ..  Case against RTC conductor is bogus: K’taka Transport Minister ಪ್ರಯಾಣಿಕರ ಗುಂಪೊಂದು ಕನ್ನಡದಲ್ಲಿ ಮಾತನಾಡಲು ಕೇಳಿದ್ದಕ್ಕಾಗಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿತ್ತು. ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಪೊಲೀಸ್ ದೂರು ದಾಖಲಿಸಿದ್ದರೆ, ಅಪ್ರಾಪ್ತ ಬಾಲಕಿ ಕಂಡಕ್ಟರ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದರು. ಘಟನೆಯ ನಂತರ, ಅವರು...
ಮಹಾರಾಷ್ಟ್ರಕ್ಕೂ ಮಾದರಿಯಾದ KSRTC; ಬೆಂಗಳೂರಿನಲ್ಲಿ ನಿಯೋಗದ ಕಸರತ್ತು

ಮಹಾರಾಷ್ಟ್ರಕ್ಕೂ ಮಾದರಿಯಾದ KSRTC; ಬೆಂಗಳೂರಿನಲ್ಲಿ ನಿಯೋಗದ ಕಸರತ್ತು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರಿಗೆ ವ್ಯವಸ್ಥೆಯಲ್ಲಿ ಮುಂಚೂಣಿ ಸೇವೆಯ ಮೂಲಕ ಗಮನಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹಾರಾಷ್ಟ್ರ ಸರ್ಕಾರಕ್ಕೂ ಮಾದರಿಯಾದಂತಿದೆ.  ಮಹಾರಾಷ್ಟ್ರ ಸರ್ಕಾರದ ಸಾರಿಗೆ ಸಚಿವ ಪ್ರತಾಪ್‌ ಸರ್‌ನಾಯಕ್‌ ನತೃತ್ವದ ನಿಯೋಗ ಬೆಂಗಳೂರಿನಲ್ಲಿರುವ KSRTC ಕೇಂದ್ರ ಕಚೇರಿ ಹಾಗೂ ಕಾರ್ಯಾಗಾರಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದ ಬೆಳವಣಿಗೆ ಕುತೂಹಲದ ಕೇಂದ್ರಬಿಂದುವಾಯಿತು. ಮಹಾರಾಷ್ಟ್ರ ಸಾರಿಗೆ ನಿಗಮ 'ಎಂ.ಎಸ್.ಆರ್.ಟಿ.ಸಿ' ವ್ಯವಸ್ಥಾಪಕ ನಿರ್ದೇಶಕ ಮಾಧವ್ ಕುಸೆಕರ್ ಹಾಗೂ ಅಧಿಕಾರಿಗಳ ತಂಡ ಈ ನಿಯೋಗದಲ್ಲಿತ್ತು. KSRTC ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ ನವೀಕರಣ, ಹೆಚ್.ಆರ್.ಎಂ.ಎಸ್., ಇ-ಟೆಕೇಟಿಂಗ್, KSRTC ಆರೋಗ್ಯ ಯೋಜನೆ, ರೂ 1 ಕೋಟಿ ಅಪಘಾತ ವಿಮೆ ಹಾಗೂ ಇತರೆ ಉಪಕ್ರಮಗಳ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಮಾಹಿತಿ ಪಡೆಯಿತು. KSRTC ಉಪಾಧ್ಯಕ್ಷ ರಿಜ್ವಾನ್ ನವಾಬ್, ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಕಾರ್ಯದರ್ಶಿ, KSRTC ವ್ಯವಸ್ಥಾಪಕ ನಿರ್ದೇಶಕರು ಈ...
KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರೀಯ ಮಟ್ಟದ 8 ವೀಡಿಯಾ - ViDEA, 5 ಎಮ್ಕ್ಯೂಬ್ - mCUBE ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳನ್ನು ಪಡೆದು ಗಮನಸೆಳೆದಿದೆ. ವೀಡಿಯಾ ಪ್ರಶಸ್ತಿಗಳು:  ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟ...
KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪಾಲಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ಕೆಎಸ್ಸಾರ್ಟಿಸಿಗೆ ಟಿವಿ-9 ನೆಟ್ವರ್ಕ್‌ ನ 'ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024' ಲಭಿಸಿದೆ. ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-9 ನೆಟ್ವರ್ಕ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯು 'ವರ್ಷದ ದೇಶದ ಅತ್ಯುತ್ತಮ ಸಂಸ್ಥೆ' ವರ್ಗದಲ್ಲಿ ಲಭಿಸಿದೆ. ನವದೆಹಲಿಯ 'ದ ಇಂಪೀರಿಯಲ್ ಜನಪತ್ ಲೇನ್, ಜನಪತ್'ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವರಾದ ಹರ್ಷ್ ಮಲೋತ್ರ ಅವರು, KSRTC ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿ, ಅಧಿಕಾರಿಗಳನ್ನು ಅಭಿನಂದಿಸಿದರು. ಕೆಎಸ್ಸಾರ್ಟಿಸಿ ನಿರ್ದೇಶಕರಾದ (ಸಿಬ್ಬಂದಿ ಮತ್ತು ಜಾಗೃತ) ಡಾ. ಕೆ.ನಂದಿನಿದೇವಿ ಅವರು ಪ್ರಶಸ್ತಿ ಸ್ವೀಕರಿಸಿದರು....