ಕೇರಳಕ್ಕೂ KSRTC ಮಾದರಿ..! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ನೆರೆ ರಾಜ್ಯದ ನಿಯೋಗ ಭೇಟಿ
ಬೆಂಗಳೂರು: ದೇಶದಲ್ಲಿ ಜನಪ್ರಿಯ ಸಾರಿಗೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಕೇರಳಕ್ಕೂ ಮಾದರಿಯಾಗಿದೆ. ಹಲವಾರು ವಿಶೇಷತೆಗಳಿಂದ ಗಮನಸೆಳೆದಿರುವ KSRTC ಬಗ್ಗೆ ಅಧ್ಯಯನಕ್ಕಾಗಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳ ತಂಡ ಬೆಂಗಳೂರಿನಲ್ಲಿರುವ KSRTC ನಿಗಮದ ಕಚೇರಿ ಹಾಗೂ ಕಾರ್ಯಾಗಾರಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.
ಈ ಸಂದರ್ಭದಲ್ಲಿ ನಿಗಮದಲ್ಲಿನ ಕಾರ್ಮಿಕ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿ ಉಪಕ್ರಮಗಳು ಹಾಗೂ ಸಾರಿಗೆಯೇತರ ಆದಾಯದ ವಿಷಯಗಳ ಬಗ್ಗೆ KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರು ಪಿ.ಎಸ್.ಪ್ರಮೋಜ್ ಸಂಕರ್ ಅವರಿಗೆ ಮಾಹಿತಿ ನೀಡಿದರು. ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ಕೇರಳ ತಂಡವು ವಿವಿಧ ಮಾದರಿಯ ಬಸ್ ಬ್ರಾಂಡಿಂಗ್ ಮತ್ತು ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿತು.
ಬಸ್ಸುಗಳ ಕಾರ್ಯ ನಿರ್ವಹಣೆ, ಪುನಶ್ಚೇತನ ಕಾರ್ಯ, ರೂ.1 ಕೋಟಿ On duty / Off duty accident insurance, KSRTC AROGYA ಯೋಜನೆ, ವಿದ್ಯಾ ಚೇತನ ಯೋಜನೆ, ಮಾಹಿತಿ ತಂತ್ರಜ್ಞಾನಗಳಉಪಕ್ರಮಗಳಾದ HRMS, ಆ...
