Wednesday, June 25

Tag: KIADB Scam

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ 'ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ' ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. 'ಸಿಟಿಜನ್ ರೈಟ್ಸ್ ಫೌಂಡೇಶನ್' ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ. ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾ...
ಮತ್ತೊಂದು ‘ಭೂ ಚಕ್ರ’ದ ಸುಳಿಯಲ್ಲಿ ಕಾಂಗ್ರೆಸ್ ಸರ್ಕಾರ; KIADB ಹಗರಣ ಬಗ್ಗೆ ಲೋಕಾಯುಕ್ತಕ್ಕೆ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು

ಮತ್ತೊಂದು ‘ಭೂ ಚಕ್ರ’ದ ಸುಳಿಯಲ್ಲಿ ಕಾಂಗ್ರೆಸ್ ಸರ್ಕಾರ; KIADB ಹಗರಣ ಬಗ್ಗೆ ಲೋಕಾಯುಕ್ತಕ್ಕೆ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ ಜಮೀನನ್ನೇ ಬೇರೆಯವರ ಹೆಸರಲ್ಲಿ ಪರಿಗಣಿಸಿ ಪರಿಹಾರ ವಿತರಿಸಿರುವ ಭಾರೀ ಅಕ್ರಮ ಆರೋಪ ಕುರಿತಂತೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. "ಸಿಟಿಜನ್ ರೈಟ್ಸ್ ಫೌಂಡೇಷನ್" ಪರವಾಗಿ ಅಧ್ಯಕ್ಷ ಕೆ.ಎ.ಪಾಲ್ ನೀಡಿರುವ ಈ ದೂರು, ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಸಹಿತ ಹಲವರಿಗೆ ಉರುಳಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದಲ್ಲೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಯಿಂದ ಭೂಸ್ವಾಧೀನ ಆದೇಶವಾಗಿದೆ. ಈ ಭೂಸ್ವಾಧೀನ ಪ್ರಕ್ರಿಯೆಯ ದಾಖಲೆಗಳನ್ನು ಗಮನಿಸಿದಾಗ ಅರ್ಹರಲ್ಲದವರ ಹೆಸರಿಗೆ ಹಣ ಸಂದಾಯ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ದೇವನಹಳ್ಳಿ ತಾಲೂಕಿನ ಸುತ್ತಮುತ್ತ ನೂರಾರು ಎಕರೆ ಜಮೀನನ್ನು ಕೆಐಎಡಿಬಿ ವತಿಯಿಂದ ಸ್ವಾಧೀನಪಡಿಸಲು ತಯಾರಿ ನಡೆದಾಗಲೇ,...