Friday, January 30

Tag: Kishor Kumar Botyadi

ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಉಡುಪಿ: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ಹುರಿಯಾಳಾಗಿ ಸಹಕಾರಿ ಧುರೀಣ ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ. ಬಿಲ್ಲವ ಸಮುದಾಯದ ಪ್ರಾಬಲ್ಯವಿರುವ ಕರಾವಳಿ ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ಪ್ರಕಟಿಸುವ ಮೂಲಕ ಅಖಾದಲ್ಲಿ ಕಾಂಗ್ರೆಸ್ ಪಕ್ಷ ಸಂಚಲನ ಸೃಷ್ಟಿಸಿದೆ ‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜು ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದ್ದಾರೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಚುನಾಯಿತರಾದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ಘೋಷಣೆಯಾಗಿದೆ.‌ ನಾಮಪತ್ರ ಸಲ್ಲಿಕೆಗೆ ಗುರುವಾರ (ಸೆ.3) ಕೊನೆ ದಿನವಾಗಿದ್ದು ಮುನ್ನಾ ದಿನದಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹೆಸರನ್ನು ಘೋಷಿಸಿದೆ....