Saturday, December 6

Tag: KPCC media wing president Ramesh Babu

ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ಮಾಸದ ಕಾರಣ ನೀಡಿ ಸಂಕ್ರಾಂತಿ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024 ರಲ...