Sunday, December 7

Tag: kSRTC ASHWAMEDHA BUS

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು.

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು (National Transport Excellence Award) ಲಭಿಸಿವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಈ ಒಕ್ಕೂಟವು 1965 ರ ಆಗಸ್ಟ್ 13ರಂದು ಅಸ್ತಿತ್ವಕ್ಕೆ ಬಂದಿದ್ದು, ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. KSRTCಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಮೂರು ಪ್ರಶಸ್ತಿಗಳು ಲಭಿಸಿವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ IPS ಅಧಿಕಾರ...