Tuesday, June 24

Tag: KSRTC BUS

ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ

ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯಸರ್ಕಾರದ 'ಶಕ್ತಿ' ಗ್ಯಾರೆಂಟಿ ಯೋಜನೆ ಮಹಿಳೆಯರ ಪಾಲಿಗೆ ವರದಾನವಾಗಿದೆ. ಇದೀಗ ಈ 'ಗ್ಯಾರೆಂಟಿ' ಯೋಜನೆಯನ್ನು ಮತ್ತಷ್ಟು ವರದಾನವಾಗಿಸುವ ನಿಟ್ಟಿನಲ್ಲಿ KSRTC ಮಹತ್ವದ ಹೆಜ್ಜೆ ಇಟ್ಟಿದೆ. ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶೀಘ್ರವೇ 2,000 ಬಸ್ ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚ...
‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

Others
ಬೆಂಗಳೂರು: ಶಕ್ತಿ ಯೋಜನೆ ಎಂಬುದು ಮಹಿಳಾ ಸಬಲೀಕರಣದೆಡೆಗಿನ ನಮ್ಮ ಸರ್ಕಾರದ ದಿಟ್ಟ ಹೆಜ್ಜೆಯಾಗಿದ್ದು, 2,000 ಹೊಸ ಬಸ್‌ಗಳ ಖರೀದಿ ಗೆ ಸರ್ಕಾರದ ಅನುಮತಿ ಸಿಕ್ಕಿದೆ. ಜೊತೆಗೆ ಸರ್ಕಾರದಿಂದ ಅನುದಾನ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಣ್ಣಿಸಿದ್ದಾರೆ. ಶಕ್ತಿ ಯೋಜನೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ದಿನನಿತ್ಯ ಪ್ರಯಾಣಿಸುವವರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ದಾಟಿದೆ. ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿರಲಿಲ್ಲ. ಹೊಸ ನೇಮಕಾತಿ ಕೂಡ ಸ್ಥಗಿತಗೊಂಡಿದ್ದರಿಂದ ಸಾರಿಗೆ ಸಂಸ್ಥೆಗಳು ತತ್ತರಿಸಿ ಹೋಗಿದ್ದ ಆ ಸಮಯದಲ್ಲಿ, ಶಕ್ತಿ ಯೋಜನೆ ಅನುಷ್ಠಾನ ಸುಲಭದ ಮಾತಾಗಿರಲಿಲ್ಲ, ನಿಜಕ್ಕೂ ಸವಾಲಾಗಿತ್ತು. ಆ ಸಮಯದಲ್ಲಿ ನಮ್ಮ ಸರ್ಕಾರವು 5800 ಹೊಸ ಬಸ್ಸುಗಳ ಸೇರ್ಪಡೆಗೆ ಹಾಗೂ 9000 ಹೊಸ ನೇಮಕಾತಿಗೆ ಅನುಮತಿ ಮತ್ತು 1000 ಅನುಕಂಪದ ಆಧಾರದ ನೇಮಕಾತಿಗಳು, ಈ ಸವಾಲನ್ನು ಸಕಾರಾತ್ಮಕವಾಗಿ ಎದುರಿಸಿ, ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲು ಸಹಕಾರಿಯಾಯಿತು ಎ...
KSRTC ಟಿಕೆಟ್ ದರ ಏರಿಕೆ; ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ ಎಂದ ಪ್ರತಿಪಕ್ಷ

KSRTC ಟಿಕೆಟ್ ದರ ಏರಿಕೆ; ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ ಎಂದ ಪ್ರತಿಪಕ್ಷ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ ಏರಿಕೆಯ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬೆಲೆ ಏರಿಕೆ ಮಾಡುವ ಮೂಲಕ ಸಿದ್ದರಾಮಯ್ಯ ಸರ್ಕಾರವು ಕನ್ನಡಿಗರ ರಕ್ತ ಹೀರುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಂಪುಟದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಅಶೋಕ್, ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ 15% ಏರಿಕೆ ಮಾಡಿದೆ ಎಂದು ಟೀಕಿಸಿದ್ದಾರೆ. ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಲ್ಲ ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು? ಎಂದು ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರ ದುರಾಡಳಿತದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಅನಿವಾರ್ಯ, ಆಸ್ತಿ ತೆರಿಗೆ ಏರಿಕೆ ಅನಿವಾರ್...
KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು

KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಸಿಕ್ಕಿವೆ. 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024ಯನ್ನು KSRTC ಪಡೆದುಕೊಂಡಿದೆ. AdWorld Showdown ಪ್ರಶಸ್ತಿಗಳು : ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ- ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ ಪಲ್ಲಕ್ಕಿ ಬಸ್ಸುಗಳ -ಅತ್ಯುತ್ತಮ ಗ್ರಾಹಕ ಸ್ವೀಕೃತಿ ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ವರ್ಷದ ಅತ್ಯುತ್ತಮ ಬ್ರ್ಯಾಂಡ್ ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. PRSI ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿದೆ. ನಿ...
“ಒಂದು‌ ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ

“ಒಂದು‌ ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಹಲವು ವೈಶಿಷ್ಟ್ಯಗಳಿಂದ ಗಮನಸೆಳೆಯಿತು.ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ–2ರ ಆವರಣದಲ್ಲಿ ನಡೆದ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಸಾರಿಗೆ‌ ಸಚಿವರು ಚಾಲನೆ ನೀಡಿದರು. ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಸಚಿವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಕಾರ್ಮಿಕರು ಸಂತೃಪ್ತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿರುವುದಾಗಿ ತಿಳಿಸಿದರು. ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿಲ್ಲ. ತಮ್ಮ ಸರ್ಕಾರ ಜಾರಿಗೆ ಬಂದ 18 ತಿಂಗಳು ಅವಧಿಯಲ್ಲಿ 1000 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿಸಿದ್ದು, ಈವರೆಗೆ 3417 ವಾಹನಗಳನ್ನು ಸೇರಿಸಲಾಗಿದೆ. ನಿಗಮವು ನೂತನವಾಗಿ ಜಾರಿಗೊಳಿಸಿದ ವಾಹ...
KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳಿಗೆ ಈ ಬಾರಿಯ ನವರಾತ್ರಿಯು ಹಿಂದೆಂದಿಗಿಂತ ವಿಶೇಷ..! ಕುತೂಹಲಕಾರಿ ನಿರ್ಧಾರದಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಆಯುಧಪೂಜೆಗೆ ನೀಡಲಾಗಿತ್ತಿದ್ದ ಹಣವನ್ನು 100 ರೂಪಾಯಿಯಿಂದ 250 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಒಂದು ಘಟಕದಲ್ಲಿ ಸರಿ ಸುಮಾರು 100 ರಿಂದ 500 ಬಸ್ಸುಗಳಿರುತ್ತವೆ. ಒಂದು ಬಸ್ಸಿಗೆ ರೂ. 100 ಎಂದು ಒಂದು ಘಟಕಕ್ಕೆ / ಕಾರ್ಯಾಗಾರಕ್ಕೆ ನೀಡಲಾಗುತ್ತದೆ. ಆಯುಧಪೂಜೆಗೆ 2008 ರವರೆಗೂ ರೂ.10 ಪ್ರತಿ‌ ಬಸ್ಸಿಗೆ , 2009 ರಲ್ಲಿ ಪ್ರತಿ ಬಸ್ಸಿಗೆ ರೂ 30 ಕ್ಕೆ ಏರಿಕೆ ಮಾಡಲಾಗಿತ್ತು. .2016 ರಲ್ಲಿ ಪ್ರತಿ ಬಸ್ಸಿಗೆ ರೂ.50 ಕ್ಕೆ ಏರಿಕೆ, 2017 ರಲ್ಲಿ ಪ್ರತಿ‌ ಬಸ್ಸಿಗೆ ರೂ.100 ಕ್ಕೆ ಏರಿಕೆ ‌ಮಾಡಲಾಗಿತ್ತು ರೂ.100 ಪ್ರತಿ‌ ಬಸ್ಸಿಗೆ ನೀಡುವ ಮೊತ್ತವು 2023 ರವರೆಗೂ ರೂ.100 ಆಗಿತ್ತು. 2024 ಅಂದರೆ ಪ್ರಸಕ್ತ ವರ್ಷದಲ್ಲಿ ಆಯುಧಪೂಜೆಗೆ ಪ್ರತಿ‌ ಬಸ್ಸಿಗೆ ಈಗ ನೀಡಲಾಗುತ್ತಿರುವ ರೂ.100 ಅನ್ನು ರೂ.250 ಕ್ಕೆ ಹೆಚ್ಚಿಸಲು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚ...
KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗಿಳಿಸಿದೆ. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲದೆ. ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು‌ ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2000 ವಿಶೇಷ ಬಸ್ಸುಗಳ ಕಾರ್ಯಾಚರಣೆ‌ ನಡೆಯಲಿದೆ ಕೆಎಸ್ಸಾರ್ಟಿಸಿ ಮಾಹಿತಿ ಒದಗಿಸಿದೆ....
KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪಾಲಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ಕೆಎಸ್ಸಾರ್ಟಿಸಿಗೆ ಟಿವಿ-9 ನೆಟ್ವರ್ಕ್‌ ನ 'ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024' ಲಭಿಸಿದೆ. ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-9 ನೆಟ್ವರ್ಕ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯು 'ವರ್ಷದ ದೇಶದ ಅತ್ಯುತ್ತಮ ಸಂಸ್ಥೆ' ವರ್ಗದಲ್ಲಿ ಲಭಿಸಿದೆ. ನವದೆಹಲಿಯ 'ದ ಇಂಪೀರಿಯಲ್ ಜನಪತ್ ಲೇನ್, ಜನಪತ್'ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವರಾದ ಹರ್ಷ್ ಮಲೋತ್ರ ಅವರು, KSRTC ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿ, ಅಧಿಕಾರಿಗಳನ್ನು ಅಭಿನಂದಿಸಿದರು. ಕೆಎಸ್ಸಾರ್ಟಿಸಿ ನಿರ್ದೇಶಕರಾದ (ಸಿಬ್ಬಂದಿ ಮತ್ತು ಜಾಗೃತ) ಡಾ. ಕೆ.ನಂದಿನಿದೇವಿ ಅವರು ಪ್ರಶಸ್ತಿ ಸ್ವೀಕರಿಸಿದರು....