Saturday, December 6

Tag: ksrtc bus ticket

ಹಬ್ಬಗಳ ಸಂದರ್ಭ KSRTCಯಿಂದ 2000 ಹೆಚ್ಚುವರಿ ಬಸ್ಸುಗಳು..

ಹಬ್ಬಗಳ ಸಂದರ್ಭ KSRTCಯಿಂದ 2000 ಹೆಚ್ಚುವರಿ ಬಸ್ಸುಗಳು..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯುಗಾದಿ, ರಂಜಾನ್ ಸಹಿತ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಊರಿಗೆ ತೆರಳಲು ಬಸ್ಸುಗಳಲ್ಲಿ ಸೀಟು ಸಿಗದೇ ಜನ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 2000 ಹೆಚ್ಚುವರಿ ಬಸ್ಸುಗಳನ್ನು ರಸ್ತೆಗಿಸಿದೆ. 31.03.2025ರಂದು ರಂಜಾನ್ ಹಬ್ಬವಿರುವುದರಿಂದ KSRTC ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 28.03.2025 to 30.03.2025ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ 2000 ಹೆಚ್ಚುವರಿ ವಾಹನಗಳ ವಿಶೇಷ ವ್ಯವಸ್ಥೆ ಮಾಡಿದೆ. ಈ ಬಗ್ಗೆ ನಿಗಮದ ಪ್ರಕಟಣೆ ತಿಳಿಸಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 31.03.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾ...
BJPಯವರಿಂದ 5900 ಕೋ.ರೂ.ಸಾಲದ ಹೊರೆ, ಹಾಗಾಗಿ ಬಸ್ ಟಿಕೆಟ್ ದರ ಹೆಚ್ಚಳ; ರಾಮಲಿಂಗ ರೆಡ್ಡಿ ಎದಿರೇಟು

BJPಯವರಿಂದ 5900 ಕೋ.ರೂ.ಸಾಲದ ಹೊರೆ, ಹಾಗಾಗಿ ಬಸ್ ಟಿಕೆಟ್ ದರ ಹೆಚ್ಚಳ; ರಾಮಲಿಂಗ ರೆಡ್ಡಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ ಮಾಡಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು ಎಂದು ಬೊಟ್ಟು ಮಾಡಿರುವ ರಾಮಲಿಂಗಾ ರೆಡ್ಡಿ, ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್ಲ ಹಾಗೂ ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ದರ ಹೆಚ್ಚಳ ಮಾಡಿದ್ದರು ಎಂದು ಗಮನಸೆಳೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ರಾಮಲಿಂಗಾ ರೆಡ್ಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಹೆಚ್ಚಳ ಮಾಡಿದಾಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ? ಎಂದು ಎದಿರೇಟು ನೀಡಿದ್ದಾರೆ. ಬಡಜನರ ಗ್ಯಾಸ್ ಸಬ್ಸಿಡಿಯನ್ನು ನಿಲ್ಲಿಸಿದರು ಆಗ ಬಿಜೆಪಿ ಅವರಿಗೆ ಜನರ ಕಷ್ಟ ತಿಳಿಯಲಿಲ್ಲವೆ? ಅಧಿಕಾರದಲ್ಲಿದ್ದಾಗ ಒಳ್ಳೆ ಆಡಳಿತ ನೀಡಿ ನಾಲಕ್ಕು ನಿಗಮಗಳನ್ನು ಅಭಿವೃದ್ಧಿ ಮಾಡಲು ಪ್ರಯತ್ನಿಸಿದ್ದರೆ ಈ ತೊಂದರೆ ನಮಗೆ ಬರುತ್ತ...