
ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್
ಹುಬ್ಬಳ್ಳಿ: ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಕ್ಸಪೋವನ್ನು ಉದ್ಘಾಟಿಸುವರು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಮಾಜಿ ಸಂಸದರಾದ ಎಂ.ಎಂ.ಹಿಂಡಸಗೇರಿ, ಮುಖಂಡರಾದ ಮಹೇಂದ್ರ ಸಿಂಘಿ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಕೆ.ಪಾಟೀಲ್, ಎಕ್ಸ್‌ಪೋ ಬಗ್ಗೆ ಮಾಹಿತಿ ಹಂಚಿಕೊಂಡರು, ಫೆಬ್ರವರಿ 27 ಮತ್ತು 28 ರಂದು 2 ದಿನಗಳ ಕಾಲ ವ್ಯವಹಾರಿಕ ಸಭೆಗಳು ನಡೆಯಲಿವೆ. ನಮ್ಮ ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, ಸ್ಮಾರಕಗಳು ಇವೆ. 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿದ್ದು, ಅವುಗಳಲ್ಲಿ 800 ಕ್ಕೂ ಹೆಚ್ಚು ಸ್ಮಾರಕಗಳನ್ನು ರಕ್ಷಿತ ಸ್ಮಾರಕಗಳಾಗಿ ಘೋಷಿಸಲಾಗಿದೆ....