
“ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ”; ಗೌರ್ನರ್ ಬಗ್ಗೆ ರಾಮಲಿಂಗಾ ರೆಡ್ಡಿ ಗರಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಆಧಾರರಹಿತ ಆರೋಪಗಳನ್ನು ಮುಂದಿಟ್ಟು ನೀಡಲಾದ ಮನವಿ ಬಗ್ಗೆ ವಿವಾದಾತ್ಮಕ ನಿರ್ಧಾರ ಪ್ರಕಟಿಸಿರುವ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. "ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ" ಎಂದು ಅವರು ಗೌರ್ನರ್ ವಿರುದ್ದ ಗುಡುಗಿದ್ದಾರೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ರಾಮಲಿಂಗಾ ರೆಡ್ಡಿ, ಬಿಜೆಪಿಯ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರಿಗೆ ಕೊಡಬೇಕಾದ ಗೌರವವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯಪಾಲರನ್ನು ಗುಮಾಸ್ತರ ರೀತಿಯಲ್ಲಿ ನಡೆಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಯಾವುದೇ ಅಪಾದನೆ ಇಲ್ಲದಿದ್ದರೂ ಸುಳ್ಳು ಕಾರಣ ನೀಡಿ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಎಂದರೆ, ಬುರುಡೆ ಜನರ ಪಕ್ಷ. ಸುಳ್ಳು ಹೇಳುವುದರಲ್ಲಿ ಬಿಜೆಪಿಗರು ...