Wednesday, June 25

Tag: MLC Manjunath Bhandari

ಮಾಧ್ಯಮಗಳಿಗೆ ಹೇಳಿಕೆ ನೀಡಬಾರದೆಂಬ ಎಚ್ಚರಿಕೆ ಉಲ್ಲಂಘಿಸಿದ ಸಚಿವರ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

ಮಾಧ್ಯಮಗಳಿಗೆ ಹೇಳಿಕೆ ನೀಡಬಾರದೆಂಬ ಎಚ್ಚರಿಕೆ ಉಲ್ಲಂಘಿಸಿದ ಸಚಿವರ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕುರ್ಚಿ ಗುದ್ದಾಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ಪಕ್ಷದ ಹೈಕಮಾಂಡ್‌ಗೆ ಮುಜುಗರ ತಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಕುರಿತುವಯಾವ ನಾಯಕರೂ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ವರಿಷ್ಠರು ತಾಕೀತು ಮಾಡಿದ್ದಾರೆ. ಆದರೂ ನಾಯಕರ ಹೇಳಿಕೆಗಳು ಮುಂದುವರಿದಿದೆ. ಈ ನಡುವೆ, ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವ ಸಚಿವರ ಬಗ್ಗೆ ಹೈಕಮಾಂಡ್ ವರದಿ ಕೇಳಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಗಳಲ್ಲ ವರಿಷ್ಠರ ಅಭಿಪ್ರಾಯ ಎಂದಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು,ಹಾಗೂ ಮುಖ್ಯಮಂತ್ರಿಗಳನ್ನು. ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು? ಮುಂದುವರಿಸಬೇಕು ಎಂಬಿತ್ಯಾದಿ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿ...
ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ ಪಕ್ಷವು ಅವರ ಮೇಲೆ ಸಲ್ಲದ ಆರೋಪ ಹೊರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರಿಗೆ ಭಾರಿ ಥ್ರೆಟ್‌ ಆಗಿ ಪರಿಣಮಿಸಿದ್ದಾರೆ. ಏಕೆಂದರೆ ಬಿಜೆಪಿಗರ ಎಲ್ಲ ಭ್ರಷ್ಟಾಚಾರ, ಅನಾಚಾರಗಳನ್ನು ಅವರು ಬಯಲಿಗೆಳೆದಿದ್ದಾರೆ. ಮಾತ್ರವಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತಾರ್ಕಿಕ ಅಂತ್ಯ ಕಾಣಿಸಲು ಪ್ರಿಯಾಂಕ್ ಖರ್ಗೆ ಅವರು ಹೋರಾಟ ಮಾಡಿದ್ದಾರೆ. ಪಿಎಸ್ಐ ಹಗರಣ, 40% ಕಮೀಷನ್‌, ಬಿಟ್ ಕಾಯಿನ್ ಹಗರಣ, ಕೋವಿಡ್ ಹಗರಣ ಹೀಗೆ ಎಲ್ಲವನ್ನೂ ಬಯಲಿಗೆಳೆದು, ಅವುಗಳನ್ನು ತನಿಖೆಯಾಗುವಂತೆ ಮಾಡಿದರು. ಮಾತ್ರವಲ್ಲ ಶಿಕ್ಷೆಯಾಗುವುದಕ್ಕೆ ಕಾರಣರಾಗಿದ್ದಾರೆ. ಅವರು ಕೇವಲ ಗಾಳಿಯಲ್ಲಿ ಗುಂಡು ಹಾರಿಸಿಲ್ಲ. ಪ್ರತಿ ಭ್ರಷ್ಟಾಚಾರವನ್ನೂ ಅಂಕಿ ಅಂಶ, ದಾಖಲೆ ಸಹಿತ ಬೀದಿಗೆ ತಂದರು. ಮತ್ತು ಪ್ರಬಲವಾಗಿ ಹೋರಾಟ ಮಾಡಿದವರು. ಹಾಗಾಗಿ ಅನಗತ್ಯವಾಗಿ ಈಗ ಸಚಿನ್‌ ಆತ್ಮಹತ್ಯೆ...