Saturday, December 6

Tag: ‘money trap’

‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದುಮಾಡುತ್ತಿದೆ. ಈ ಬಗ್ಗೆ ತ್ಪ್ರತಿಪಕ್ಷಗಳು ತನಿಖೆಗೆ ಪಟ್ಟುಹಿಡಿದಿವೆ. ಇದೇ ವೇಳೆ, ಆಡಳಿತಾರೂಢ ಕಾಂಗ್ರೆಸ್ ನಾಯಕರ ನಡುವಿನ ಹನಿಟ್ರ್ಯಾಪ್ ಗುದ್ದಾಟ ಬಗ್ಗೆ ಪ್ರತಿಪಕ್ಷ ಬಿಜೆಪಿ ವ್ಯಂಗ್ಯವಾಡಿದೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಹೆಚ್.ಸಿ.ಮಹದೇವಪ್ಪ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಡಾ.ಪರಮೇಶ್ವರ್ ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ...