
‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು
ಮಂಗಳೂರು: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಗತ ವೈಭವ ಮರುಕಳಿಸಿದೆ. ಐತಿಹಾಸಿಕ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲದ ಸುದೀರ್ಘ ಜಾತ್ರೆ ಇದಾಗಿದ್ದು ದೇಶ-ವಿದೇಶಗಳಲ್ಲಿ 'ಪೊಳಲಿ ಚೆಂಡು' ಎಂದೇ ಇದು ಪ್ರತೀತಿ. ಈ ವರ್ಷ 28 ದಿನಗಳ ಜಾತ್ರೆ ನಡೆಯಲಿದ್ದು ಎಪಿಲ್ 9 ರಂದು 'ಕಡೆ ಚೆಂಡು' ನಿಗದಿಯಾಗಿದೆ.
ಪೊಳಲಿ ಚೆಂಡು ಉತ್ಸವದ ಸಂಕ್ಷಿಪ್ತ ಕ್ಯಾಲೆಂಡರ್ ಹೀಗಿದೆ:
ಈ ಬಾರಿ ಏಪ್ರಿಲ್ 4ರಂದು 20ನೇ ದಂಡಮಾಲೋತ್ಸವ, ಏಪ್ರಿಲ್ 5ರಂದು ಮೊದಲ ಚೆಂಡು, ಏಪ್ರಿಲ್ 9ರಂದು ಕಡೇ ಚೆಂಡು, ಏಪ್ರಿಲ್ 10ರಂದು ಬ್ರಹ್ಮ ರಥೋತ್ಸವ, ಏಪ್ರಿಲ್ 11ರಂದು ಆರಾಟ ಮಹೋತ್ಸವ ಜರುಗಲಿದೆ.
ದಕ್ಷಿಣಕನ್ನಡದ ಪೊಳಲಿಯಲ್ಲಿರುವ ನಾಡಿನ ಅಧಿ ದೇವತೆ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಪ್ರತೀ ವರ್ಷ ಮಾರ್ಚ್ 14ರ ತಡರಾತ್ರಿ ಧ್ವಜಾರೋಹಣ ಮೂಲಕ ಜಾತ್ರಾ ಮಹೋತ್ಸವಕ್ಕೆ ಮುನ್ನುಡಿ ಬರೆಯಲಾಗುತ್ತದೆ. ಧ್ವಜಾರೋಹಣ ನಂತರವಷ್ಟೇ ಎಷ್ಟು ದಿನಗಳ ಜಾತ್ರೆ ನಡೆಯುತ್ತದೆ ಎಂಬುದು ಘೋಷಣೆಯಾಗುವುದು. ಈ ಘೋಷಣೆಯನ್ನು ಕೇಳಲು ಇಡೀ ನಾಡು ಕಾತುರದಿಂದ ಕಾಯುತ್ತಿರುವುದೇ ವಿಶೇಷ. ಈ ಬ...