‘ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಭಂಡಾರಿ ವಿಶ್ವಾಸ
'ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ, ಸಂಸತ್ತಿನಲ್ಲಿ ಶೋಷಿತರ ಧ್ವನಿಯಾಗಲಿದ್ದಾರೆ'; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಶಾಸಕ ಮಂಜುನಾಥ್ ಭಂಡಾರಿ ವಿಶ್ವಾಸ..
ವಯನಾಡ್: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಇಡೀ ದೇಶದ ಗಮನಸೆಳೆದಿದೆ. ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು ಅವರನ್ನು ಗೆಲ್ಲಿಸಲು ಪಕ್ಷದ ನಾಯಕರು ಅವಿರತ ಶ್ರಮ ವಹಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಗೆಲ್ಲಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರೂ ಶ್ರಮವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಕರಾವಳಿಯ ಶಾಸಕ ಮಂಜುನಾಥ್ ಭಂಡಾರಿ ತಮ್ಮ ಕಾರ್ಯಕರ್ತ ಸೈನ್ಯದೊಂದಿಗೆ ವಯನಾಡಿನ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿ ರಾಹುಲ್ ಸಹೋದರಿಯನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಬಹಳಷ್ಟು ಮಂದಿ ವಯನಾಡಿನಲ್ಲಿದ್ದು ಅವರ ಮತಗಳನ್ನು ಪೇರಿಸಲು ಮಂಜುನಾಥ್ ಭಂಡಾರಿ ಪ್ರಯತ್ನ ನಡೆಸಿದ್ದಾರೆ.
ವಯನಾಡ್ ಲೋಕಸಭಾ ...
