Saturday, December 6

Tag: R.Ashok

ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ

ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, "ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ" ಎಂದು ಹೇಳಿದರು. ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, "ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ" ಎಂದು ವ್ಯಂಗ್ಯವಾಡಿದರು....
ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ. Pak media highlights CM Siddaramaiah’s ‘no war’ remarks, K’taka BJP says ‘puppet of enemy nation’ ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಮುಂದಿಟ್ಟು ಸುದ್ದಿ ಬಿತ್ತರಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ. Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we focus on...
ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅಭಿವೃದ್ಧಿಗೆ ದಾರಿ ಮಾಡಿದ್ದರು. ನಾನು ಕೂಡ ಎರಡು ವರ್ಷಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ವ್ಯಾಪಾರ ವಹಿವಾಟು ಉತ್ತಮವಾಗಿ ನಡೆಯುತ್ತಿತ್ತು. ಬಹುಸಂಖ್ಯಾತ ಮುಸ್ಲಿಮರು ಪ್ರತಿ ದಿನ 10,000 ರೂ. ಸಂಪಾದನೆ ಮಾಡುತ್ತಿದ್ದೇವೆ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಈಗ ಪಾಕಿಸ್ತಾನ ಪ್ರೇರಿತವಾದ ಭಯೋತ್ಪಾದಕ ಸಂಘಟನೆ ಈ ಕೆಲಸ ಮಾಡಿರುವುದು ಖಂಡನೀಯ ಎಂದರು. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡಬೇಕು. ಜಾಮೀನು ಪಡೆದು ಹೊರಗೆ ಬಂದ ಭಯೋತ್ಪಾದಕರ ಮೇಲೆ ನಿಗಾ ವಹಿಸಬೇಕು. ಅಂಥವರನ್ನು ಪೊಲೀಸರು ಕೂಡ...
ಜನಿವಾರ ಕತ್ತರಿಸಿ ಬಿಸಾಡಲಾಗಿದೆ, ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ; ಅಶೋಕ್ ಆಕ್ರೋಶ

ಜನಿವಾರ ಕತ್ತರಿಸಿ ಬಿಸಾಡಲಾಗಿದೆ, ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ; ಅಶೋಕ್ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.‌ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್‌ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್‌ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು. ಹಿಂದೂಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್‌ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಸರ್ಕಾರ ಹಿಂದೂಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದರು....
ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಧಾನಸಭೆಯಲ್ಲಿ ಸದನಕ್ಕೆ ಅಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆಯಾದರೂ ಆ ಅಶಿಸ್ತಿಗೆ ಪ್ರಚೋದನೆ ನೀಡಿರುವ ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಗಮನಸೆಳೆದಿದೆ. ಈ ಕುರಿತಂತೆ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್ ಯು.ಟಿ.ಖದರ್ ಅವರಿಗೆ ನೀಡಿದ್ದಾರೆ. ಸಂಸದೀಯ ವಿಶ್ಲೇಷಕರೂ, ವಕೀಲರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು ಅವರು ವಿಧಾನಸಭೆಯ ಅಧಿವೇಶನದಲ್ಲಿ ಶುಕ್ರವಾರ ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ ಸದನವು ಅಂಗೀಕರಿಸಿದ ಪ್ರಸ್ತಾವದ ಲೋಪ ಕುರಿತು ಸ್ಪೀಕರ್ ಅವರ ಗಮನಸೆಳೆದಿದ್ದಾರೆ. ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ 21-03-2025 ರಂದು ಸದನದಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮಂಡಿಸಿದ ಪ್ರಸ್ತಾವನೆಯ ಮೇಲೆ 18 ಮಂದಿ ಬಿಜೆಪಿ ಶಾಸಕರನ್ನು 6 ...
ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿ ಶಾಸಕರ ಅಮಾನತು: ಬಿಜೆಪಿ ಆಕ್ರೋಶ

ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿ ಶಾಸಕರ ಅಮಾನತು: ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದ್ದು, ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ ಸಮುದಾಯದ ಹಿರಿಯ ಸಚಿವರೊಬ್ಬರು ನನಗೆ ರಕ್ಷಣೆ ಕೊಡಿ ಎಂದು ಸದನದಲ್ಲಿ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ, ಯಾರ ಒತ್ತಡದಲ್ಲಿದೆ? ಯಾರ ಒತ್ತಡಕ್ಕೆ ಮಣಿದು ತನಿಖೆಗೆ ಆದೇಶ ಮಾಡಲು ಮೀನಾಮೇಷ ಎಣಿಸುತ್ತಿದೆ? ಎಂದು ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್'ನಲ್ಲಿ ಪ್ರಶ್ನೆ ಮಾಡಿದ್ದಾರೆ. ರಾಜ್ಯದ ಒಬ್ಬ ಹಿರಿಯ ಶಾಸಕರು, ಹಾಲಿ ಸಚಿವರಿಗೇ ರಕ್ಷಣೆ ಇಲ್ಲದಮೇಲೆ, ಇನ್ನು ನಾಡಿನ ಜನಸಾಮಾನ್ಯರ ಕಥೆ ಏನು? ಇದನ್ನು ಪ್ರಶ್ನೆ ಮಾಡುವುದು ವಿಪಕ್ಷಗಳ ಕರ್ತವ್ಯ ಅಲ್ಲವೇ? ಸರ್ಕಾರವನ್ನು ಪ್...
‘ಗ್ಯಾರಂಟಿ’ ಅವಾಂತರ: ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ?

‘ಗ್ಯಾರಂಟಿ’ ಅವಾಂತರ: ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. 'UDAYA NEWS' ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್‌ ಫೀಸ್‌ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ. ಲೂಟಿ...
ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ..!?

ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ..!?

Focus, ಪ್ರಮುಖ ಸುದ್ದಿ, ರಾಜ್ಯ
ಹಾಸನ: ಕಾಂಗ್ರೆಸ್‌ ನಾಯಕರು ಮುಸ್ಲಿಮರ ಮತಗಳ ಋಣದಲ್ಲಿ ಇರುವುದರಿಂದ ಗಲಭೆ ವಿಚಾರದಲ್ಲಿ ಗಲಭೆಕೋರರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಸಕಲೇಶಪುರ ಪಟ್ಟಣದಲ್ಲಿ ನಡೆದ, ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್,, ಮೈಸೂರಿನಲ್ಲಿ ನಡೆದ ಗಲಭೆಯ ವಿಚಾರದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒಂದು ದಾರಿ ಹಿಡಿದರೆ, ಸಿಎಂ ಸಿದ್ದರಾಮಯ್ಯ ಮತ್ತೊಂದು ದಾರಿ ಹಿಡಿದಿದ್ದಾರೆ. ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿ, ಪೊಲೀಸರನ್ನು ಗಾಯಗೊಳಿಸುವುದು ಹೊಸತಲ್ಲ. ಮೈಸೂರಿನ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸದೇ ಇದ್ದಲ್ಲಿ ಇಡೀ ಪೊಲೀಸ್‌ ಠಾಣೆ ಧ್ವಂಸವಾಗುತ್ತಿತ್ತು. ಪೊಲೀಸರು ಬಹಳ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ. ಮುಸ್ಲಿಮರ ಮತಗಳ ಭಿಕ್ಷೆಯ ಋಣದಲ್ಲಿ ಕಾಂಗ್ರೆಸ್‌ ಇರುವುದರಿಂದ, ಸಚಿವರು, ಮುಖ್ಯಮಂತ್ರಿ ಈ ರೀತಿ ವರ್ತಿಸುತ್ತಿದ್ದಾರೆ. ಕಾಂ...
ಮೈಕ್ರೋ ಫೈನಾನ್ಸ್‌ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಮೈಕ್ರೋ ಫೈನಾನ್ಸ್‌ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು. ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿ...
ಬಾಣಂತಿಯರ ಸರಣಿ ಸಾವಿನ ರೀತಿ ನಿರ್ಲಕ್ಷ್ಯ, ಎಡವಟ್ಟುಗಳು HMPV ಸೋಂಕು ನಿಯಂತ್ರಣದಲ್ಲಿ ಬೇಡ; ಸರ್ಕಾರಕ್ಕೆ BJP 10 ಸಲಹೆಗಳು

ಬಾಣಂತಿಯರ ಸರಣಿ ಸಾವಿನ ರೀತಿ ನಿರ್ಲಕ್ಷ್ಯ, ಎಡವಟ್ಟುಗಳು HMPV ಸೋಂಕು ನಿಯಂತ್ರಣದಲ್ಲಿ ಬೇಡ; ಸರ್ಕಾರಕ್ಕೆ BJP 10 ಸಲಹೆಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಲಹೆ ನೀಡಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರು ಮತ್ತು ನವಜಾತ ಶಿಶುಗಳ ಸರಣಿ ಸಾವನ್ನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ ಎಂದವರು ಗಮನಸೆಳೆದಿದ್ದಾರೆ. ಕೇವಲ ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಸರ್ಕಾರ ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಸರ್ಕಾರಕ್ಕೆ ಮತ್ತು ಟಾಸ್ಕ್ ಫೋರ್ಸ್ ಗೆ ತಾಂತ್ರಿಕ ಮಾರ್ಗದರ್ಶನ ನೀಡಲು ಒಂದು ತಜ್ಞರ ವೈದ್ಯರ ಸಮಿತಿ ರಚನೆ ಮಾಡಬೇಕು. ಸಣ್ಣ ಮಕ್ಕಳು, ಹಿರಿಯ ನಾಗರಿಕರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಈಗಾಗಲೇ ಶ್ವಾಸಕೋಶ ಸಮಸ್...