Saturday, December 6

Tag: R.Ashok

ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ ಪಕ್ಷವು ಅವರ ಮೇಲೆ ಸಲ್ಲದ ಆರೋಪ ಹೊರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರಿಗೆ ಭಾರಿ ಥ್ರೆಟ್‌ ಆಗಿ ಪರಿಣಮಿಸಿದ್ದಾರೆ. ಏಕೆಂದರೆ ಬಿಜೆಪಿಗರ ಎಲ್ಲ ಭ್ರಷ್ಟಾಚಾರ, ಅನಾಚಾರಗಳನ್ನು ಅವರು ಬಯಲಿಗೆಳೆದಿದ್ದಾರೆ. ಮಾತ್ರವಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತಾರ್ಕಿಕ ಅಂತ್ಯ ಕಾಣಿಸಲು ಪ್ರಿಯಾಂಕ್ ಖರ್ಗೆ ಅವರು ಹೋರಾಟ ಮಾಡಿದ್ದಾರೆ. ಪಿಎಸ್ಐ ಹಗರಣ, 40% ಕಮೀಷನ್‌, ಬಿಟ್ ಕಾಯಿನ್ ಹಗರಣ, ಕೋವಿಡ್ ಹಗರಣ ಹೀಗೆ ಎಲ್ಲವನ್ನೂ ಬಯಲಿಗೆಳೆದು, ಅವುಗಳನ್ನು ತನಿಖೆಯಾಗುವಂತೆ ಮಾಡಿದರು. ಮಾತ್ರವಲ್ಲ ಶಿಕ್ಷೆಯಾಗುವುದಕ್ಕೆ ಕಾರಣರಾಗಿದ್ದಾರೆ. ಅವರು ಕೇವಲ ಗಾಳಿಯಲ್ಲಿ ಗುಂಡು ಹಾರಿಸಿಲ್ಲ. ಪ್ರತಿ ಭ್ರಷ್ಟಾಚಾರವನ್ನೂ ಅಂಕಿ ಅಂಶ, ದಾಖಲೆ ಸಹಿತ ಬೀದಿಗೆ ತಂದರು. ಮತ್ತು ಪ್ರಬಲವಾಗಿ ಹೋರಾಟ ಮಾಡಿದವರು. ಹಾಗಾಗಿ ಅನಗತ್ಯವಾಗಿ ಈಗ ಸಚಿನ್‌ ಆತ್ಮಹತ್ಯೆ...
‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಶಕ್ತಿ' ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ.‌ ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ‌ ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ 'X'ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. 'ಶಕ್ತಿ' ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್...
ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು. ಕಾಂಗ್ರೆಸ್‌ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್‌ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ...