
ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿ 5.02 ಲಕ್ಷ ಜನರಿಗೆ ಉದ್ಯೋಗಾವಕಾಶ
ಪ್ರಧಾನಮಂತ್ರಿಯವರ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಇಂಟರ್ನಶಿಪ್ ಯೋಜನೆಗಳಿಂದ ಸುಮಾರು 4.10 ಕೋಟಿ ಯುವಜನರಿಗೆ ಪ್ರಯೋಜನವಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾದ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿಯಲ್ಲಿ 2014 ರಿಂದ 2024 ರವರೆಗೆ 5.02 ಲಕ್ಷ ಯುವಜನರಿಗೆ ಉದ್ಯೋಗಾವಕಾಶ ನೀಡಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿಯವರ ಆಶಯದಂತೆ ಉದ್ಯೋಗ ಸೃಷ್ಟಿಯ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲು ರೈಲ್ವೆ ಇಲಾಖೆಯು ವಾರ್ಷಿಕ ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2024ರ ಜನವರಿಯಿಂದ ಇದುವರೆಗೆ ರೈಲ್ವೆ ಇಲಾಖೆಯಲ್ಲಿ ಸುಮಾರು 71,000 ಹುದ್ದೆಗಳನ್ನು ಸೃಷ್ಟಿಸಿದ್ದು ಇವುಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅವರು ಹೇಳಿದರು. 2047ರಲ್ಲಿ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಕ್ರಮಗಳನ್ನು ಸರ್ಕಾರ ಕೈಗೊ...