Saturday, June 20

Tag: Shakthi yojana

‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಶಕ್ತಿ' ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ.‌ ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ‌ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ 'X'ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. 'ಶಕ್ತಿ' ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ.ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್...
‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಶಕ್ತಿ ಯೋಜನೆ ಮುನ್ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಕುರಿತಂತೆ ತಾವು ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ರಾಮಲಿಂಗ ರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.‌ 'ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ' ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ತಾವು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಬೇಕೆಂದು ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ...