
ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೆಪಿಸಿಸಿ ನಾಯಕರು
ಬೆಂಗಳೂರು: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ತೀರ್ಮಾನ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಬಿಜೆಪಿ, ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿದ್ದಾರೆ.
ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ @BJP4India ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡ...